ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಉನ್ನತ ಮಟ್ಟದ ಸಭೆಯನ್ನುಇಂದು ನಡೆಸಿದ್ದಾರೆ. ನವದೆಹಲಿಯ ಸೌತ್ ಬ್ಲಾಕ್ನಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಉಪಸ್ಥಿತರಿದ್ದರು.
ಇತ್ತೀಚಿನ ತಿಂಗಳುಗಳಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಬಾಧಿಸುತ್ತಿರುವ ಭಯೋತ್ಪಾದನೆ ಸಂಬಂಧಿತ ಘಟನೆಗಳ ಸರಣಿಗೆ ಪ್ರತಿಕ್ರಿಯೆಯಾಗಿ ಸಭೆಯನ್ನು ಕರೆಯಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಭದ್ರತಾ ಪಡೆಗಳನ್ನು ಕಟ್ಟೆಚ್ಚರ ವಹಿಸಲಾಗಿದೆ.
ಈ ನಡುವೆ ಇಂದು ಜಮ್ಮುವಿನ ದೋಡಾ ಜಿಲ್ಲೆಯ ಎತ್ತರದ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಸೇನಾ ಕ್ಯಾಪ್ಟನ್ ಹತರಾಗಿದ್ದಾರೆ ಮತ್ತು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಭಯೋತ್ಪಾದಕ ದಾಳಿಯಲ್ಲಿ ಗಮನಾರ್ಹ ಏರಿಕೆಯಾದ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಪರಿಸ್ಥಿತಿಯು ಅಸ್ಥಿರವಾಗಿದೆ. ಆಗಸ್ಟ್ 10 ರಂದು ಅನಂತನಾಗ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ್ದರು. ಈ ಪ್ರದೇಶವು ಕಥುವಾದಲ್ಲಿ ಸೇನಾ ಬೆಂಗಾವಲು ಪಡೆಯ ಮೇಲೆ ದಾಳಿಗಳು, ದೋಡಾ ಮತ್ತು ಉಧಮ್ಪುರದಲ್ಲಿ ಗುಂಡಿನ ಚಕಮಕಿಗಳನ್ನು ಕಂಡಿದೆ
ಕಳೆದ ಎರಡು ತಿಂಗಳುಗಳಲ್ಲಿ, ದಾಳಿಗಳು ಮತ್ತು ಹೊಂಚುದಾಳಿಗಳು ಹೆಚ್ಚಾಗಿದೆ, ಪಿರ್ ಪಂಜಾಲ್ನ ದಕ್ಷಿಣ ಭಾಗಗಳು ಸ್ವಲ್ಪ ಸಮಯದವರೆಗೆ ಭಯೋತ್ಪಾದಕ ಚಟುವಟಿಕೆಯ ವಿಷಯದಲ್ಲಿ ಶಾಂತವಾಗಿತ್ತು, ಈಗ ಅಲ್ಲಿ ಮತ್ತೆ ಉಗ್ರರು ಗರಿಬಿಚ್ಚಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.