ನವದೆಹಲಿ: ದೆಹಲಿಯ ಕೆಂಪು ಕೋಟೆಯಲ್ಲಿ ಸತತ 11 ನೇ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, 140 ಕೋಟಿ ಭಾರತೀಯರು ಬಾಂಗ್ಲಾದೇಶದ ಹಿಂದೂಗಳ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಎಂದಿದ್ದಾರೆ.
“140 ಕೋಟಿ ಭಾರತೀಯರು ಬಾಂಗ್ಲಾದೇಶದಲ್ಲಿರುವ ಹಿಂದೂಗಳು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ. ಭಾರತವು ಯಾವಾಗಲೂ ಬಾಂಗ್ಲಾದೇಶದ ಪ್ರಗತಿಯ ಹಿತೈಷಿಯಾಗಿರುತ್ತದೆ. ಬಾಂಗ್ಲಾದೇಶದಲ್ಲಿ ಪರಿಸ್ಥಿತಿಯು ಶೀಘ್ರದಲ್ಲೇ ಸಾಮಾನ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಭಾರತೀಯರು ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ ಎಂಬ ಭರವಸೆ ಇದೆ” ಎಂದರು.
ತನ್ನ ನೆರೆಯ ರಾಷ್ಟ್ರಗಳು ಅಭಿವೃದ್ಧಿ ಹೊಂದುತ್ತಿರುವುದನ್ನು ಮತ್ತು ಏಳಿಗೆಯನ್ನು ಕಾಣುವುದನ್ನು ನೋಡುವುದು ಭಾರತದ ಬಯಕೆಯಾಗಿರುತ್ತದೆ ಮತ್ತು ಬಾಂಗ್ಲಾದೇಶದ ಪ್ರಗತಿ ಮತ್ತು ಯೋಗಕ್ಷೇಮಕ್ಕೆ ನಿರಂತರ ಬೆಂಬಲವನ್ನು ನಾವು ನೀಡುತ್ತೇವೆ ಎಂದರು.
ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿಯಾದ ಬಳಿಕ ಅಲ್ಲಿನ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರಗಳು ತಾರಕಕ್ಕೇರಿದೆ. ಈ ನಡುವೆ ಪ್ರಧಾನಿ ಮೋದಿಯವರು ಕೆಂಪುಕೋಟೆಯಲ್ಲೂ ಈ ವಿಷಯ ಪ್ರಸ್ತಾಪಿಸಿದದು ಮಹತ್ವ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.