ನವದೆಹಲಿ: ಮಾಜಿ ಪ್ರಧಾನಿ ಹಾಗೂ ಬಿಜೆಪಿ ದಿಗ್ಗಜ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು.
ವಾಜಪೇಯಿ ಅವರ ಸ್ಮಾರಕ ‘ಸದೈವ್ ಅಟಲ್’ಗೆ ಶ್ರದ್ಧಾಂಜಲಿ ಸಲ್ಲಿಸಲು ಕೇಂದ್ರ ಸಚಿವರು ಸೇರಿದಂತೆ ಇತರ ಗಣ್ಯರು ಮತ್ತು ವಿವಿಧ ಪಕ್ಷಗಳ ನಾಯಕರು ಆಗಮಿಸುತ್ತಿದ್ದಾರೆ.
ಅತ್ಯುತ್ತಮ ವಾಗ್ಮಿಗಳೆಂದು ಗುರುತಿಸಲ್ಪಟ್ಟಿದ್ದ ದೇಶದ ಗೌರವಾನ್ವಿತ ರಾಜಕಾರಣಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು 90 ರ ದಶಕದ ಸಮ್ಮಿಶ್ರ ಯುಗದಲ್ಲಿ ದೇಶಕ್ಕೆ ಮಾದರಿ ನೇತೃತ್ವ ನೀಡಿದ್ದರು ಮತ್ತು ಬಿಜೆಪಿಯಿಂದ ಆರಿಸಲ್ಪಟ್ಟ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದರು..
1998-2004 ರ ನಡುವೆ ಅವರ ನಾಯಕತ್ವದಲ್ಲಿ ದೇಶದಲ್ಲಿ ಹಲವು ಸುಧಾರಣೆಗಳು ಮತ್ತು ಮೂಲಸೌಕರ್ಯ ಕ್ಷೇತ್ರಗಳಿಗೆ ಉತ್ತೇಜನ ದೊರೆತಿದೆ. ಅವರು 2018 ರಲ್ಲಿ 93 ನೇ ವಯಸ್ಸಿನಲ್ಲಿ ನಿಧನರಾದರು.
ಸದೈವ ಅಟಲ್ಗೆ ತರಳಿದ ಬಳಿಕ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಅಪ್ರತಿಮ ಕೊಡುಗೆಗಾಗಿ ಅಸಂಖ್ಯಾತ ಜನರು ಅವರನ್ನು ಸ್ಮರಿಸುತ್ತಾರೆ. ನಮ್ಮ ಸಹ ನಾಗರಿಕರು ಉತ್ತಮ ಗುಣಮಟ್ಟದ ಜೀವನವನ್ನು ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಅವರು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟರು. ಭಾರತಕ್ಕಾಗಿ ಅವರ ದೃಷ್ಟಿಯನ್ನು ಈಡೇರಿಸಲು ನಾವು ಕೆಲಸ ಮಾಡುತ್ತಲೇ ಇರುತ್ತೇವೆ” ಎಂದಿದ್ದಾರೆ.
Tributes to Atal Ji on his Punya Tithi.
He is remembered by countless people for his unparalleled contribution to nation building. He devoted his entire life towards ensuring that our fellow citizens lead a better quality of life. We will keep working to fulfill his vision for… pic.twitter.com/MfGUl9WUTy
— Narendra Modi (@narendramodi) August 16, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.