ಬೆಂಗಳೂರು: ತನ್ನ ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖಗೊಂಡಿರುವ ಕರ್ನಾಟಕ ಲೋಕಾಯುಕ್ತ ಇ-ಆಡಳಿತವನ್ನು ಜಾರಿಗೆ ತರಲು ಹೆಜ್ಜೆ ಮುಂದಿಟ್ಟಿದೆ. ಈ ಮೂಲಕ ಸಿಬ್ಬಂದಿಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಉದ್ದೇಶವನ್ನೂ ಹೊಂದಿದೆ.
ಲೋಕಾಯುಕ್ತ ಕಚೇರಿಯು ಇ-ಆಡಳಿತವನ್ನು ಅಳವಡಿಸಿಕೊಳ್ಳಲಿದೆ ಮತ್ತು ತನ್ನ ಎಲ್ಲಾ ವಿಭಾಗಗಳನ್ನು ಡಿಜಿಟಲೀಕರಣಗೊಳಿಸಲಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಲೋಕಾಯುಕ್ತದಲ್ಲಿ ಇ-ಕಾರ್ಯಾಲಯದ ನೆರವಿನಿಂದ ಇ-ಆಡಳಿತ ಅಳವಡಿಸಿಕೊಳ್ಳಲು ಸಂಸ್ಥೆಯ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ಮುಂದಿನ ಹಂತದಲ್ಲಿ, ದೂರು ಸ್ವೀಕರಿಸುವ ಮತ್ತು ತಾಂತ್ರಿಕ ವಿಭಾಗಗಳಲ್ಲಿ ಡಿಜಿಟಲೀಕರಣವನ್ನು ಪರಿಚಯಿಸಲಾಗುತ್ತದೆ ಎಂದಿದ್ದಾರೆ.
ಎಲ್ಲಾ 1,247 ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸೇವಾ ವಿವರಗಳನ್ನು ಡಿಜಿಟಲೀಕರಣಗೊಳಿಸುವ ಗುರಿ ಇದೆ. ಸಂಸ್ಥೆಯಲ್ಲಿನ ಅಧಿಕಾರಿಗಳಿಗೆ ಸಹಾಯಕ ಸಿಬ್ಬಂದಿ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಒಂಬತ್ತು ಪ್ರಥಮ ದರ್ಜೆ ಸಹಾಯಕರು ಮತ್ತು 26 ದ್ವಿತೀಯ ದರ್ಜೆ ಸಹಾಯಕರ ಹುದ್ದೆ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಲೋಕಸೇವಾ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಲು ಚಿಂತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.