ಗುವಾಹಟಿ: ಅತ್ಯಂತ ಪ್ರತಿಕೂಲ ಸಂದರ್ಭಗಳಲ್ಲಿ ಸಂವಿಧಾನದ ತತ್ವಗಳನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶ್ಲಾಘಿಸಿದ್ದಾರೆ.
“ಗುವಾಹಟಿಯಲ್ಲಿ ಪಶ್ಚಿಮ ಬಂಗಾಳದ ಗೌರವಾನ್ವಿತ ಗವರ್ನರ್ ಡಾ. ಸಿ.ವಿ. ಆನಂದ ಬೋಸ್ ಜಿ ಅವರೊಂದಿಗಿನ ನನ್ನ ಸೌಜನ್ಯದ ಭೇಟಿಯ ಸಂದರ್ಭದಲ್ಲಿ, ಅತ್ಯಂತ ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಸಂವಿಧಾನವನ್ನು ರಕ್ಷಿಸುವ ಅವರ ಜಾಣತನಕ್ಕೆ ನನ್ನ ಅಪಾರ ಮೆಚ್ಚುಗೆಯನ್ನು ನಾನು ತಿಳಿಸಿದ್ದೇನೆ” ಎಂದು ಶರ್ಮಾ ಟ್ವಿಟ್ ಮಾಡಿದ್ದಾರೆ.
ಮಹಿಳಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಬಂಗಾಳದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಕುರಿತು ರಾಜ್ಯಪಾಲರು ಮತ್ತು ಅಸ್ಸಾಂ ಸಿಎಂ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಭಯ ಮುಖಂಡರು ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಇನ್ನೊಂದೆಡೆ ಅಸ್ಸಾಂನ ವೈದ್ಯರ ತಂಡ ರಾಜ್ಯಪಾಲರನ್ನು ಭೇಟಿಯಾಗಿ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಹತ್ಯೆಗೆ ನ್ಯಾಯ ಮತ್ತು ವೈದ್ಯಕೀಯ ವೃತ್ತಿಪರರಿಗೆ ಭದ್ರತೆಯನ್ನು ನೀಡುವಂತೆ ಕೋರಿದ್ದಾರೆ.
In my courtesy meeting with the Hon’ble Governor of West Bengal Dr C.V. Ananda Bose Ji in Guwahati, I conveyed our immense appreciation for his sagacity in defending the Constitution even in very adversarial circumstances.@BengalGovernor pic.twitter.com/5f1CaM60e2
— Himanta Biswa Sarma (@himantabiswa) August 18, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.