ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಇಂದು ನೇಪಾಳದ ವಿದೇಶಾಂಗ ಸಚಿವ ಅರ್ಜು ರಾಣಾ ದೇವುಬಾ ಅವರೊಂದಿಗೆ ನವದೆಹಲಿಯಲ್ಲಿ ಮಾತುಕತೆ ನಡೆಸಿದರು. ಇಂಧನ, ವ್ಯಾಪಾರ, ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಬಹುಮುಖಿ ದ್ವಿಪಕ್ಷೀಯ ಸಹಕಾರದ ಕುರಿತು ಉಭಯ ನಾಯಕರು ಚರ್ಚಿಸಿದರು.
ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ಡಾ ಜೈಶಂಕರ್ ಅವರು, ನೇಪಾಳವು ಭಾರತಕ್ಕೆ ಸುಮಾರು ಒಂದು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಅನ್ನು ರಫ್ತು ಮಾಡಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಾರತದ ನೆರೆಹೊರೆ ಮೊದಲು ನೀತಿ ಮತ್ತು ಅನನ್ಯ ಜನರಿಂದ ಜನರ ನಡುವಣ ಸಂಪರ್ಕ ಮತ್ತು ಸಾಂಸ್ಕೃತಿಕ ಸಂಪರ್ಕವು ಸಂಬಂಧವನ್ನು ಮುಂದಕ್ಕೆ ಕೊಂಡೊಯ್ಯುತ್ತದೆ ಎಂದರು.
ನೇಪಾಳದ ವಿದೇಶಾಂಗ ಸಚಿವ ಅರ್ಜು ರಾಣಾ ದೇವುಬಾ ಅವರು ಐದು ದಿನಗಳ ಭಾರತ ಭೇಟಿಗಾಗಿ ನಿನ್ನೆ ನವದೆಹಲಿಗೆ ಆಗಮಿಸಿದರು. ಈ ಭೇಟಿಯು ಎರಡು ನೆರೆಯ ದೇಶಗಳ ನಡುವಿನ ನಿಯಮಿತ ಉನ್ನತ ಮಟ್ಟದ ವಿನಿಮಯದ ಸಂಪ್ರದಾಯದೊಂದಿಗೆ ಹೊಂದಿಕೆಯಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ನೇಪಾಳ ತನ್ನ ನೈಬರ್ಹುಡ್ ಫಸ್ಟ್ ನೀತಿಯಲ್ಲಿ ಭಾರತದ ಆದ್ಯತೆಯ ಪಾಲುದಾರ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.