ವರ್ಸಾವೋ: ಪೋಲೆಂಡ್ ಮತ್ತು ಉಕ್ರೇನ್ಗೆ ಎರಡು ರಾಷ್ಟ್ರಗಳ ಭೇಟಿಯ ಮೊದಲ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾತ್ರಿ ಪೋಲೆಂಡ್ನ ವಾರ್ಸಾವೊ ತಲುಪಿದ್ದು, ಅಲ್ಲಿನ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯ ಸ್ವಾಗತ ನೀಡಲಾಯಿತು. ಹೊಟೇಲ್ನಲ್ಲಿ ಭಾರತೀಯ ವಲಸಿಗರಿಂದ ಸಾಂಪ್ರದಾಯಿಕ ಸ್ವಾಗತವನ್ನೂ ಪಡೆದರು. ಬಳಿಕ ಅವರು ಜಾಮ್ ಸಾಹೇಬ್ ನವನಗರ ಸ್ಮಾರಕ ಮತ್ತು ಮಾಂಟೆ ಕ್ಯಾಸಿನೊ ಯುದ್ಧದ ಸ್ಮಾರಕ ಮತ್ತು ಕೊಲ್ಹಾಪುರ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸಿದರು.
ಇಂದು ಅವರು ವರ್ಸಾವೋದಲ್ಲಿ ಸಮುದಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದ್ದಾರೆ.
ಇದಕ್ಕೂ ಮುನ್ನ ತಮ್ಮ ನಿರ್ಗಮನ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಮಧ್ಯ ಯುರೋಪ್ನಲ್ಲಿ ಪೋಲೆಂಡ್ ಪ್ರಮುಖ ಆರ್ಥಿಕ ಪಾಲುದಾರ. ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ಭಾರತ-ಪೋಲೆಂಡಿನ ಪರಸ್ಪರ ಬದ್ಧತೆ ಎರಡು ರಾಷ್ಟ್ರಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಹೇಳಿದ್ದರು.
ಉಭಯ ದೇಶಗಳು ತಮ್ಮ ರಾಜತಾಂತ್ರಿಕ ಸಂಬಂಧಕ್ಕೆ 70 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಪೋಲೆಂಡ್ ಭೇಟಿ ನಡೆದಿದೆ. ತಮ್ಮ ಎರಡು ದಿನಗಳ ಅಧಿಕೃತ ಭೇಟಿಯಲ್ಲಿ ಮೋದಿ ಅವರು ಪ್ರಧಾನಿ ಡೊನಾಲ್ಡ್ ಟಸ್ಕ್ ಮತ್ತು ಅಧ್ಯಕ್ಷ ಆಂಡ್ರೆಜ್ ದುಡಾ ಅವರನ್ನು ಭೇಟಿ ಮಾಡಲಿದ್ದಾರೆ. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.
Thank you Warsaw! Today’s community programme was extremely lively and memorable.
Here are some glimpses. pic.twitter.com/b4KzxE2Zld
— Narendra Modi (@narendramodi) August 21, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.