ಚಿಕಾಗೋ: ಚಿಕಾಗೋದಲ್ಲಿ ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಶನ್ನ ಮೂರನೇ ದಿನವಾದ ಬುಧವಾರ ಪ್ರಾರಂಭವಾದ ಸಮಾವೇಶದಲ್ಲಿ ವೇದಿಕೆಯ ಮೇಲೆ ಹಿಂದೂ ಪ್ರಾರ್ಥನೆಗಳನ್ನು ನಡೆಸಲಾಯಿತು.
ಹಿಂದೂ ಅರ್ಚಕರು ಸಮಾವೇಶವನ್ನು ಪ್ರಾರಂಭಿಸಿದ್ದು, ಈ ಸಂದರ್ಭದಲ್ಲಿ “ಓಂ ಶಾಂತಿ ಶಾಂತಿ” ಘೋಷಣೆಗಳು ಸಭಾಂಗಣದಾದ್ಯಂತ ಪ್ರತಿಧ್ವನಿಸಿತು. ಮೇರಿಲ್ಯಾಂಡ್ನ ಶ್ರೀ ಶಿವ ವಿಷ್ಣು ದೇವಸ್ಥಾನದ ಅರ್ಚಕ ರಾಕೇಶ್ ಭಟ್ ಅವರು ಅಖಂಡ ದೇಶಕ್ಕಾಗಿ ಆಶೀರ್ವಾದ ಕೋರಿ ವೈದಿಕ ಪ್ರಾರ್ಥನೆ ಮಾಡಿದರು.
“ಜನರಿಗಾಗಿ, ನಮ್ಮ ಭವಿಷ್ಯಕ್ಕಾಗಿ” ಎಂಬ ಥೀಮ್ ಅಡಿಯಲ್ಲಿ ಸಮಾವೇಶವನ್ನು ಆಯೋಜಿಸಲಾಗಿದ್ದು, ಇದರಲ್ಲಿ ಮಾಜಿ ಯುಎಸ್ ಅಧ್ಯಕ್ಷ ಬಿಲ್ ಕ್ಲಿಂಟನ್, ಮಾಜಿ ಯುಎಸ್ ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿ, ಅಮೇರಿಕನ್ ಹೋಸ್ಟ್ ಮತ್ತು ಟೆಲಿವಿಷನ್ ನಿರ್ಮಾಪಕ ಓಪ್ರಾ ವಿನ್ಫ್ರೇ ಮತ್ತು ಕಮಲಾ ಹ್ಯಾರಿಸ್ ಅವರ ಸಹವರ್ತಿ ಟಿಮ್ ವಾಲ್ಜ್ ಪ್ರಮುಖ ಭಾಷಣಕಾರರಾಗಿದ್ದರು.
ಈ ವೇಳೆ ಮಾತನಾಡಿದ ಯುಎಸ್ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್, ಮುಂಬರುವ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ಹಸನ್ಮುಖಿ ಅಧ್ಯಕ್ಷರಿಗೆ ಮತ ಚಲಾಯಿಸುವಂತೆ ಅಮೆರಿಕನ್ನರನ್ನು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.