ಲಕ್ನೋ: ಸರ್ಕಾರಿ ನೌಕರರಿಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮಹತ್ವದ ಆದೇಶ ಹೊರಡಿಸಿದೆ. ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳನ್ನು ಆನ್ಲೈನ್ನಲ್ಲಿ ಸಲ್ಲಿಸಬೇಕು , ಇಲ್ಲದಿದ್ದರೆ ಅವರು ಆಗಸ್ಟ್ ತಿಂಗಳ ಸಂಬಳವನ್ನು ಪಡೆಯುವುದಿಲ್ಲ ಎಂದು ಸ್ಪಷ್ಟ ಆದೇಶವನ್ನು ನೀಡಿದೆ.
ಐಎಎಸ್ ಮತ್ತು ಪಿಸಿಎಸ್ ಅಧಿಕಾರಿಗಳಿಗೆ ಈಗಾಗಲೇ ಜಾರಿಯಲ್ಲಿರುವ ಈ ನಿಯಮಾವಳಿಗಳು ಇದೀಗ ಅಲ್ಲಿ ಬೇರೆ ಸರ್ಕಾರಿ ನೌಕರರಿಗೂ ಅನ್ವಯಿಸಲಿದೆ.
ಆರಂಭದಲ್ಲಿ ಸಿಬ್ಬಂದಿ ಇಲಾಖೆ ಆದೇಶ ಹೊರಡಿಸಿದ್ದು, ನೌಕರರು ತಮ್ಮ ಆಸ್ತಿ ವಿವರವನ್ನು ಜೂನ್ 30ರೊಳಗೆ ಸಲ್ಲಿಸಬೇಕು, ಪಾಲಿಸದಿರುವವರು ಬಡ್ತಿ ಪಡೆಯಲು ಅನರ್ಹರಾಗುತ್ತಾರೆ ಎಂದು ಎಚ್ಚರಿಕೆ ನೀಡಿತ್ತು. ಹೀಗಿದ್ದರೂ ಹೆಚ್ಚಿನ ಸಂಖ್ಯೆಯ ನೌಕರರು ಈ ನಿರ್ದೇಶನವನ್ನು ಪಾಲಿಸದ ಕಾರಣ ಜುಲೈ 31ರ ವರೆಗೆ ಗಡುವನ್ನು ವಿಸ್ತರಿಸಲು ಇಲಾಖೆ ಮುಂದಾಗಿದೆ.
ಆದರೆ, ಮಂಗಳವಾರ ಹೊರಡಿಸಿದ ಆದೇಶದಲ್ಲಿ, ಸ್ಪಷ್ಟ ಸೂಚನೆಗಳ ಹೊರತಾಗಿಯೂ ಮಾನವ ಸಂಪದ ಪೋರ್ಟಲ್ನಲ್ಲಿ ಕೇವಲ 26% ಉದ್ಯೋಗಿಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಬಹಿರಂಗಪಡಿಸಿದ್ದಾರೆ. ಹೀಗಾಗಿ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿದ ನೌಕರರು ಮಾತ್ರ ತಮ್ಮ ಆಗಸ್ಟ್ ತಿಂಗಳ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
ಉತ್ತರ ಪ್ರದೇಶ ಸರ್ಕಾರಿ ನೌಕರರ ನಿಯಮಗಳು, 1956 ರ ನಿಯಮ 24 ರ ಪ್ರಕಾರ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಮಾನವ ಸಂಪದ ಪೋರ್ಟಲ್ ಮೂಲಕ ತಮ್ಮ ಚರ ಮತ್ತು ಸ್ಥಿರ ಆಸ್ತಿಗಳ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಆದೇಶ ಹೊರಡಿಸಿದ್ದಾರೆ.
ಮಾನವ ಸಂಪನ್ಮೂಲ ಪೋರ್ಟಲ್ ಅನ್ನು ರಾಜ್ಯ ಸರ್ಕಾರವು ತನ್ನ ಉದ್ಯೋಗಿಗಳಿಗೆ ಸಮಯೋಚಿತ, ಪರಿಣಾಮಕಾರಿ ಮತ್ತು ಪಾರದರ್ಶಕ ಸೇವೆಗಳನ್ನು ನೀಡಲು ಅಭಿವೃದ್ಧಿಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.