ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಸದಸ್ಯತ್ವ ಅಭಿಯಾನದ ಸಂಬಂಧ ರಾಜ್ಯ ಕಾರ್ಯಾಗಾರವು ನಾಳೆ (ಆ.24) ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 3ರ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಾಗಾರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹ, ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭಾಗವಹಿಸುವರು ಎಂದು ತಿಳಿಸಿದ್ದಾರೆ.
ಈ ಕಾರ್ಯಾಗಾರದಲ್ಲಿ ಪಕ್ಷದ ರಾಜ್ಯದ ಎಲ್ಲ ಸಂಸದರು, ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪ್ರಮುಖ ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಸಂಘಟನಾತ್ಮಕ ವ್ಯವಸ್ಥೆಯಲ್ಲಿ ಈ ಅಭಿಯಾನವು ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.