ಪೊಳಲಿ: ಸಾರ್ವಜನಿಕರ ಅನುಕೂಲಕ್ಕಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮಹತ್ವದ ಕಾರ್ಯ ಮಾಡಿದ್ದಾರೆ. ಪೊಳಲಿಯಿಂದ ಅಡ್ಡೂರುವರೆಗೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದು, ಇಂದು ಅದಕ್ಕೆ ಪೊಳಲಿಯಲ್ಲಿ ಚಾಲನೆ ನೀಡಲಾಯಿತು.
ಪೊಳಲಿ ರಾಜರಾಜೇಶ್ವರಿ ದೇಗುಲದಲ್ಲಿ ಅರ್ಚಕರ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಮಿನಿ ಬಸ್ಗೆ ರಾಜೇಶ್ ನಾಯ್ಕ್ ಉಳಿಪಾಡಿಯವರು ಚಾಲನೆ ನೀಡಿದರು.
ಪೊಳಲಿ ಪಲ್ಗುಣಿ ನದಿಯ ಮೇಲಿನ ಅಡ್ಡೂರು ಸೇತುವೆಯಲ್ಲಿ ದುರಸ್ಥಿ ಕಾರ್ಯ ನಡೆಯುತ್ತಿರುವುದರಿಂದ ಅದನ್ನು ಬಂದ್ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇದರ ಮೂಲಕ ನಿತ್ಯ ಸಂಚರಿಸುತ್ತಿರುವವರಿಗೆ ಭಾರೀ ಅನಾನುಕೂಲವಾಗಿದೆ. ಹೀಗಾಗಿ ಜನರ ಸದುಪಯೋಗಕ್ಕಾಗಿ ಉಚಿತ ವಾಹನದ ವ್ಯವಸ್ಥೆಯನ್ನು ಶಾಸಕ ರಾಜೇಶ್ ನಾಯ್ಕ್ ಸ್ವಂತ ಖರ್ಚಿನಲ್ಲಿ ಮಾಡಿದ್ದಾರೆ.
ಈ ಬಸ್ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗ ಬಸ್ ನಿರಂತರವಾಗಿ ಓಡಾಟ ಮಾಡಲಿದೆ.
ಮಂಗಳೂರು ತಾಲ್ಲೂಕಿನ ಅಡ್ಡೂರು ಸೇತುವೆ ದುರಸ್ತಿ ಹಿನ್ನೆಲೆ ಘನ ವಾಹನ ಸಂಚಾರ ನಿಷೇಧಗೊಂಡು ವಿದ್ಯಾರ್ಥಿಗಳು, ಶ್ರೀ ಕ್ಷೇತ್ರ ಪೊಳಲಿಯ ಭಕ್ತಾದಿಗಳಿಗೆ ಸಮಸ್ಯೆ ಉಂಟಾಗಿದ್ದು, ಸಮಸ್ಯೆಗೆ ಪರಿಹಾರವೆಂಬಂತೆ ಜನರ ನಿತ್ಯ ಓಡಾಟಕ್ಕೆ ವೈಯಕ್ತಿಕ ನೆಲೆಯಲ್ಲಿ ಮಿನಿ ಬಸ್ ಖರೀದಿಸಿ ಉಚಿತ ವಾಹನ ವ್ಯವಸ್ಥೆಗೆ ಚಾಲನೆ ನೀಡಲಾಯಿತು.#Polali #Bantwala pic.twitter.com/K3r7lZ5Hap
— Rajesh Naik U (@URajeshNaik) August 24, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.