ನವದೆಹಲಿ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ನ್ಯಾಷನಲ್ ಕಾನ್ಫರೆನ್ಸ್ ಜೊತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಟುವಾಗಿ ಟೀಕಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆಯನ್ನು ಉತ್ತೇಜಿಸುವುದಾಗಿ ಉಲ್ಲೇಖಿಸಿರುವ ಅದರ ಚುನಾವಣಾ ಪ್ರಣಾಳಿಕೆಯ ವಿರುದ್ಧ ಕಿಡಿಕಾರಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತವು ಸೆಪ್ಟೆಂಬರ್ 18 ರಂದು ಪ್ರಾರಂಭವಾಗುತ್ತದೆ ಮತ್ತು ನಂತರ ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯಲಿದೆ. ಅಕ್ಟೋಬರ್ 4 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.
“ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಲಾಗಿದೆ. ಈ ಚುನಾವಣೆಯು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮಾತ್ರವಲ್ಲದೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿರುವ ಪ್ರತಿಯೊಬ್ಬ ಭಾರತೀಯರಿಗೂ ಮುಖ್ಯವಾಗಿದೆ” ಎಂದು ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ.
ಇಂಡಿ ಮೈತ್ರಿಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ಮತ್ತು ಅಬ್ದುಲ್ಲಾ ಕುಟುಂಬದ ನ್ಯಾಷನಲ್ ಕಾನ್ಫರೆನ್ಸ್ ರಚಿಸಿರುವ ಮೈತ್ರಿ ದೇಶದ ಮುಂದೆ ತನ್ನ ದೇಶ ವಿರೋಧಿ ಯೋಜನೆಯನ್ನು ಪ್ರಸ್ತುತಪಡಿಸಿದೆ ಎಂದು ಯೋಗಿ ಕಿಡಿಕಾರಿದ್ದಾರೆ.
ಎರಡು ಪಕ್ಷಗಳ ಚುನಾವಣಾ ಪೂರ್ವ ಮೈತ್ರಿ ರಾಷ್ಟ್ರೀಯ ಭದ್ರತೆ ಮತ್ತು ಸಂವಿಧಾನಕ್ಕೆ ದೊಡ್ಡ ಅಪಾಯ ಉಂಟುಮಾಡುತ್ತದೆ ಎಂದು ಆದಿತ್ಯನಾಥ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.