ಜಲಗಾಂವ್: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಹಾರಾಷ್ಟ್ರದ ಜಲಗಾಂವ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 11 ಲಕ್ಷ ಹೊಸ ಲಖ್ಪತಿ ದೀದಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು ಮತ್ತು ಅವರನ್ನು ಸನ್ಮಾನಿಸಿದರು ಮತ್ತು ಅವರ ವ್ಯವಹಾರ ಚಟುವಟಿಕೆಗಳ ಬಗ್ಗೆ ಸಂವಾದ ನಡೆಸಿದರು.
ದೇಶದಲ್ಲಿ ಒಂದು ಕೋಟಿಗೂ ಹೆಚ್ಚು ಇರುವ ಈ ಲಖ್ಪತಿ ದೀದಿಗಳು ವರ್ಷಕ್ಕೆ ಒಂದು ಲಕ್ಷ ರೂಪಾಯಿಗೂ ಹೆಚ್ಚು ಆದಾಯ ಗಳಿಸುತ್ತಿದ್ದಾರೆ. ಮೂರನೇ ಅವಧಿಯ ಮೋದಿ ಸರ್ಕಾರದಡಿ 11 ಲಕ್ಷ ಮಂದಿ ಲಖ್ಪತಿ ದೀದಿಯರಾಗಿ ಹೊರಹೊಮ್ಮಿದರು.
ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರು ಆವರ್ತ ನಿಧಿಯನ್ನು ಬಿಡುಗಡೆ ಮಾಡಿದ್ದು, 2,500 ಕೋಟಿ ರೂಪಾಯಿಗಳ ಸಮುದಾಯ ಹೂಡಿಕೆ ನಿಧಿಯು 4.3 ಲಕ್ಷ ಸ್ವಸಹಾಯ ಗುಂಪುಗಳ ಸುಮಾರು 48 ಲಕ್ಷ ಸದಸ್ಯರಿಗೆ ಪ್ರಯೋಜನವನ್ನು ನೀಡಲಿದೆ. ಪ್ರಧಾನಮಂತ್ರಿ ಅವರು 5,000 ಕೋಟಿ ರೂಪಾಯಿಗಳ ಬ್ಯಾಂಕ್ ಸಾಲವನ್ನು ಬಿಡುಗಡೆ ಮಾಡಿದ್ದು, ಇದು 2 ಲಕ್ಷದ 35,400 ಸ್ವಸಹಾಯ ಗುಂಪುಗಳ 25.8 ಲಕ್ಷ ಸದಸ್ಯರಿಗೆ ಪ್ರಯೋಜನವನ್ನು ನೀಡುತ್ತದೆ.
ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡನ್ವಿಸ್ ಮತ್ತು ಅಜಿತ್ ಪವಾರ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 34 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 30,000 ಸ್ಥಳಗಳು ಅಂದರೆ ದೇಶಾದ್ಯಂತದ ರಾಜ್ಯ ರಾಜಧಾನಿಗಳು, ಜಿಲ್ಲಾ ಪ್ರಧಾನ ಕಛೇರಿಗಳು ಮತ್ತು CLF ವರ್ಚುವಲ್ ಮಾಧ್ಯಮದ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾದವು.
The #LakhpatiDidi initiative is making a difference in women’s lives. Spoke to women associated with self-help groups in Jalgaon about their journey.https://t.co/qil5LMBn1T
— Narendra Modi (@narendramodi) August 26, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.