ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಝನ್ಸ್ಕಾರ್, ಡ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಎಂಬ ಐದು ಹೊಸ ಜಿಲ್ಲೆಗಳನ್ನು ರಚಿಸಲು ಕೇಂದ್ರ ನಿರ್ಧರಿಸಿದೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಲಡಾಖ್ ಜನರಿಗೆ ಹೇರಳವಾದ ಅವಕಾಶಗಳನ್ನು ಸೃಷ್ಟಿಸಲು ಮೋದಿ ಸರ್ಕಾರ ಬದ್ಧವಾಗಿದೆ. ಅಭಿವೃದ್ಧಿ ಹೊಂದಿದ ಮತ್ತು ಸಮೃದ್ಧ ಲಡಾಖ್ ಅನ್ನು ನಿರ್ಮಿಸುವ ಪ್ರಧಾನಮಂತ್ರಿ ಮೋದಿ ಅವರ ದೃಷ್ಟಿಗ ಅನುಗುಣವಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಗೃಹಸಚಿವಾಲಯ ನಿರ್ಧರಿಸಿದೆ. ಹೊಸ ಜಿಲ್ಲೆಗಳಾಗ ಝನ್ಸ್ಕಾರ್, ದ್ರಾಸ್, ಶಾಮ್, ನುಬ್ರಾ ಮತ್ತು ಚಾಂಗ್ತಾಂಗ್ ಉದಯಿಸಲಿದೆ. ಇದು ಪ್ರತಿಯೊಂದು ಮೂಲೆಯಲ್ಲಿಯೂ ಆಡಳಿತವನ್ನು ಬಲಪಡಿಸುವ ಮೂಲಕ ಜನರಿಗೆ ಮೀಸಲಾದ ಪ್ರಯೋಜನಗಳನ್ನು ಅವರ ಮನೆ ಬಾಗಿಲಿಗೆ ಕೊಂಡೊಯ್ಯುತ್ತದೆ” ಎಂದು ಅಮಿತ್ ಶಾ ಹೇಳಿದರು.
ಆರ್ಟಿಕಲ್ 370 ರದ್ದಾದ ನಂತರ ಜಮ್ಮು-ಕಾಶ್ಮೀರದಿಂದ ಪ್ರತ್ಯೇಕಗೊಂಡ ಲಡಾಖ್ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶವಾಗಿ ಉದಯಿಸಿತು.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಇದು ಹತ್ತು ವರ್ಷಗಳ ನಂತರ ಚುನಾವಣೆಗೆ ಸಾಕ್ಷಿಯಾಗಲಿದೆ, ಕೊನೆಯ ವಿಧಾನಸಭಾ ಚುನಾವಣೆ 2014 ರಲ್ಲಿ ನಡೆದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.