ಕೋಲ್ಕತ್ತಾ: ಬಿಜೆಪಿ ಇಂದು ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್ಜಿ ಕರ್ ಆಸ್ಪತ್ರೆಯೊಳಗೆ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯಲ್ಲಿ ಭಾಗಿಯಾಗಿರುವವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಕ್ಷಿಸಿದ್ದಾರೆ ಎಂದು ಆರೋಪಿಸಿದ್ದು, ಸಿಬಿಐ ಅವರಿಗೆ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದೆ.
ಕೋಲ್ಕತ್ತಾದಲಿ ಪ್ರತಿಭಟನಾಕಾರರ ಮೇಲೆ ನಡೆದ ಲಾಠಿ ಚಾರ್ಜ್ಗೆ ಪ್ರತಿಕ್ರಿಯಿಸಿದ ಬಿಜೆಪಿ, ಬ್ಯಾನರ್ಜಿ ಅವರನ್ನು ಸರ್ವಾಧಿಕಾರಿ ಎಂದು ಕರೆದಿದೆ ಮತ್ತು ಅವರ ರಾಜೀನಾಮೆಗೆ ಒತ್ತಾಯಿಸಿದೆ. ಅಲ್ಲದೇ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯೆಲ್ ಅವರಿಗೂ ಸುಳ್ಳು ಪತ್ತೆ ಪರೀಕ್ಷೆ ನಡೆಸುವಂತೆ ಬಿಜೆಪಿ ಒತ್ತಾಯಿಸಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಬಲಪ್ರಯೋಗ ಮಾಡಿರುವುದನ್ನು ಪಕ್ಷ ಖಂಡಿಸಿದೆ.
“ಪಶ್ಚಿಮ ಬಂಗಾಳದಲ್ಲಿ ಏನೇ ಆಗಿದ್ದರೂ ಆತಂಕಕಾರಿ. ಇದು ಸಂವಿಧಾನವನ್ನು ಚೂರುಚೂರು ಮಾಡುವಂತಿದೆ. ದೇಶದಲ್ಲಿ ವೈದ್ಯರು ಇಂದು ಬೀದಿಗಿಳಿದಿದ್ದರೆ ಅದಕ್ಕೆ ಕಾರಣ ಮಮತಾ ಬ್ಯಾನರ್ಜಿ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪೊಲೀಸ್ ಕಮಿಷನರ್ ಅವರು ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಆತ್ಮಹತ್ಯೆ ಎಂದು ಭಾಟಿಯಾ ಹೇಳಿದ್ದಾರೆ. ಈ ಮೂಲಕ ತಪ್ಪು ಮಾಹಿತಿ ರವಾನಿಸುವ ಕೆಲಸ ಮಾಡಿದ್ದಾರೆ. ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಭಾಟಿಯಾ ಆಗ್ರಹಿಸಿದ್ದಾರೆ.
“ಸತ್ಯ ಹೊರಬರಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಸತ್ಯಾಂಶ ತಿಳಿಯಲು ಮಮತಾ ಬ್ಯಾನರ್ಜಿ ಮತ್ತು ಪೊಲೀಸ್ ಆಯುಕ್ತರ ಪಾಲಿಗ್ರಾಫ್ ಪರೀಕ್ಷೆ ನಡೆಸಬೇಕು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.