ನವದೆಹಲಿ: ಜಯ್ ಶಾ ಅವರನ್ನು ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ. ಅಕ್ಟೋಬರ್ 2019 ರಿಂದ ಬಿಸಿಸಿಐ ಕಾರ್ಯದರ್ಶಿಯಾಗಿ ಮತ್ತು ಜನವರಿ 2021 ರಿಂದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಶಾ, ಹಾಲಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅವಧಿಯ ಅಂತ್ಯದ ನಂತರ ಡಿಸೆಂಬರ್ನಲ್ಲಿ ಐಸಿಸಿ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
35 ವರ್ಷ ವಯಸ್ಸಿನ ಶಾ ಅವರು ಐಸಿಸಿ ಇತಿಹಾಸದಲ್ಲಿಯೇ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ. ಅಲ್ಲದೇ ಈ ಹಿಂದೆ ಐಸಿಸಿಯ ಮುಖ್ಯಸ್ಥರಾಗಿದ್ದ ಭಾರತೀಯರಾದ ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಅವರ ಸಾಲಿಗೆ ಸೇರ್ಪಡೆಯಾದರು.
ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮನಿರ್ದೇಶಿತರಾಗಿದ್ದ ಶಾ, ಕ್ರೀಡೆಯನ್ನು ಮತ್ತಷ್ಟು ಜನಪ್ರಿಯಗೊಳಿಸುವ ತಮ್ಮ ಉದ್ದೇಶವನ್ನು ಪುನರುಚ್ಛರಿಸಿದ್ದಾರೆ. ವಿಶೇಷವಾಗಿ ಲಾಸ್ ಏಂಜಲೀಸ್ 2028 ರ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ.
“ಕ್ರಿಕೆಟ್ ಅನ್ನು ಮತ್ತಷ್ಟು ಜಾಗತೀಕರಣಗೊಳಿಸಲು ಐಸಿಸಿ ತಂಡ ಮತ್ತು ನಮ್ಮ ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಬದ್ಧನಾಗಿದ್ದೇನೆ. ಬಹು ಸ್ವರೂಪಗಳ ಸಹಬಾಳ್ವೆಯನ್ನು ಸಮತೋಲನಗೊಳಿಸುವುದು, ಸುಧಾರಿತ ತಂತ್ರಜ್ಞಾನಗಳ ಅಳವಡಿಕೆಯನ್ನು ಉತ್ತೇಜಿಸುವುದು ಮತ್ತು ಹೊಸ ಜಾಗತಿಕ ಮಾರುಕಟ್ಟೆಗಳಿಗೆ ನಮ್ಮ ಈವೆಂಟ್ಗಳನ್ನು ಪರಿಚಯಿಸುವುದು ಹೆಚ್ಚು ಮುಖ್ಯವಾದ ನಿರ್ಣಾಯಕ ಘಟ್ಟದಲ್ಲಿ ನಾವು ನಿಂತಿದ್ದೇವೆ. ಕ್ರಿಕೆಟ್ ಅನ್ನು ಹಿಂದೆಂದಿಗಿಂತಲೂ ಹೆಚ್ಚು ಅಂತರ್ಗತ ಮತ್ತು ಜನಪ್ರಿಯಗೊಳಿಸುವುದು ನಮ್ಮ ಗುರಿಯಾಗಿದೆ” ಎಂದು ಜಯ್ ಶಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.