ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಸಮ್ಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಆ.31ಕ್ಕೆ ಮುಂದೂಡಿಕೆ ಮಾಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಿಚಾರಣೆ ಆರಂಭಿಸಿತ್ತು, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸುಧೀರ್ಘವಾಗಿ ವಾದ ಮಂಡಿಸಿದರು. “ಸಿಎಂ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ನ್ಯಾಯಾಂಗ ಪರಿಶೀಲಿಸಬಹುದು. ಈಗಾಗಲೇ ಅದರ ಬಗ್ಗೆ ಎರಡು ತೀರ್ಪುಗಳು ಬಂದಿವೆ. ಗವರ್ನರ್ ವಿವೇಚನೆಯನ್ನೇ ಬಳಸಿಲ್ಲ. ಸಂಪುಟ ನಿರ್ಧಾರಕ್ಕೆ ಅವರು ಬದ್ಧರಾಗಿಲ್ಲ” ಎಂದಿದ್ದಾರೆ.
ಈ ವೇಳೆ ಮಾತನಾಡಿದ ನ್ಯಾಯಮೂರ್ತಿಗಳು, ಸಂಪುಟದ ನಿರ್ಧಾರಕ್ಕೆ ರಾಜ್ಯಪಾಲರು ಬದ್ಧರಾಗಬೇಕಿಲ್ಲ. ಗವರ್ನರ್ ಸ್ವಂತ ನಿರ್ಧಾರ ತೆಗೆದುಕೊಳ್ಳಬಹುದು. ಸಿಎಂ ವಿರುದ್ಧ ನಿರ್ಧಾರ ತೆಗೆದುಕೊಳ್ಳುವುದು ರಾಜ್ಯಪಾಲರ ಸ್ವತಂತ್ರ ನಿರ್ಧಾರ. ಉಳಿದೆಲ್ಲ ಪ್ರಕರಣಗಳಲ್ಲಿ ರಾಜ್ಯಪಾಲರು ಕ್ಯಾಬಿನೆಟ್ ಸಲಹೆ ಪರಿಗಣಿಸಬೇಕು. ಈ ಪ್ರಕರಣದಲ್ಲಿ ಸಲಹೆ ಪರಿಗಣಿಸಬೇಕೆಂದಿಲ್ಲ ಎಂದು ಹೇಳಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅನಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಬಳಸಿಕೊಂಡು 14 ನಿವೇಶನಗಳನ್ನು ಪಡೆದಿದ್ದಾರೆ ಎಂದು ರಾಜ್ಯಪಾಲರಿಗೆ ಟಿ.ಜೆ. ಅಬ್ರಾಹ್ಂ, ಪ್ರವೀಣ್ ಹಾಗೂ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ಗೆ ಹಾಜರಾಗುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರು ನೋಟೀಸ್ ಜಾರಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.