ಇಸ್ಲಾಮಾಬಾದ್: ಅಕ್ಟೋಬರ್ ಮಧ್ಯದಲ್ಲಿ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಮುಂಬರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ ಎಂದು ಪಾಕಿಸ್ತಾನ ಇಂದು ಔಪಚಾರಿಕವಾಗಿ ಪ್ರಕಟಿಸಿದೆ.
ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಅವರು ತಮ್ಮ ವಾರದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸಭೆಯಲ್ಲಿ ಭಾಗವಹಿಸಲು ಪಾಕಿಸ್ಥಾನ ರಾಷ್ಟ್ರಗಳ ಮುಖ್ಯಸ್ಥರಿಗೆ ಆಹ್ವಾನಗಳನ್ನು ಕಳುಹಿಸಿದೆ ಎಂದಿದ್ದಾರೆ
“ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನವನ್ನು ಕಳುಹಿಸಲಾಗಿದೆ, ಕೆಲವು ದೇಶಗಳು ಈಗಾಗಲೇ ಸಭೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿವೆ. ಯಾವ ದೇಶವು ಆಗಮನವನ್ನು ದೃಢೀಕರಿಸಿದೆ ಎಂಬುದನ್ನು ಸರಿಯಾದ ಸಮಯದಲ್ಲಿ ತಿಳಿಸಲಾಗುವುದು” ಎಂದು ಹೇಳಿದ್ದಾರೆ.
ಅಕ್ಟೋಬರ್ 15-16 ರಂದು SCO ಸರ್ಕಾರದ ಮುಖ್ಯಸ್ಥರ ಸಭೆಯನ್ನು ಪಾಕಿಸ್ತಾನ ಆಯೋಜಿಸಲಿದೆ. ಸಮಾರಂಭಕ್ಕೂ ಮುಂಚಿತವಾಗಿ ಸಚಿವರ ಸಭೆ ಮತ್ತು ಹಲವಾರು ಸುತ್ತಿನ ಹಿರಿಯ ಅಧಿಕಾರಿಗಳ ಸಭೆಗಳು SCO ಸದಸ್ಯ ರಾಷ್ಟ್ರಗಳ ನಡುವೆ ನಡೆಯಲಿದ್ದು, ಇವು ಆರ್ಥಿಕ, ಸಾಮಾಜಿಕ-ಸಾಂಸ್ಕೃತಿಕ ಮತ್ತು ಮಾನವೀಯ ಸಹಕಾರವನ್ನು ಕೇಂದ್ರೀಕರಿಸುತ್ತವೆ.
ಭಾರತ-ಪಾಕಿಸ್ಥಾನ ದೇಶಗಳ ನಡುವಿನ ಸಂಬಂಧಗಳು ಉದ್ವಿಗ್ನವಾಗಿರುವುದರಿಂದ ಪಿಎಂ ಮೋದಿ ಆಹ್ವಾನವನ್ನು ಸ್ವೀಕರಿಸುವ ಸಾಧ್ಯತೆಯಿಲ್ಲದ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.