ಶಿಮ್ಲಾ: ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಪರಿಸ್ಥಿತಿ ತೀವ್ರ ಬಿಗಡಾಯಿಸಿದ್ದು, ರಾಜ್ಯದ ಕಠೋರ ಆರ್ಥಿಕ ಸ್ಥಿತಿಯ ಬಗ್ಗೆ ಸ್ವತಃ ಅಲ್ಲಿನ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ತಮ್ಮ ಸಚಿವರು, ಮುಖ್ಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಮಂಡಳಿಗಳು ಮತ್ತು ನಿಗಮಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಂಬಳ ಮತ್ತು ಭತ್ಯೆಗಳ ಪಾವತಿಯನ್ನು ಎರಡು ತಿಂಗಳವರೆಗೆ ಮುಂದೂಡುವುದಾಗಿ ಘೋಷಿಸಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಸುಖು, 2023-24ನೇ ಹಣಕಾಸು ವರ್ಷದಲ್ಲಿ ರಾಜ್ಯಗಳ ಆದಾಯ ಮತ್ತು ಆದಾಯ ವೆಚ್ಚಗಳ ನಡುವಿನ ಅಂತರವನ್ನು ಸರಿದೂಗಿಸಲು ಕೇಂದ್ರ ಸರ್ಕಾರವು ಒದಗಿಸಿದ ಆದಾಯ ಕೊರತೆ ಅನುದಾನ (RDG) 8,058 ಕೋಟಿ ರೂಪಾಯಿಗಳಷ್ಟಿದೆ ಎಂದು ಬಹಿರಂಗಪಡಿಸಿದರು.
ವಿಧಾನಸಭೆಯಲ್ಲಿ ರಾಜ್ಯದ ಆರ್ಥಿಕ ಸಂಕಷ್ಟ ಹಾಗೂ ತಾವು ಸಂಬಳ ಪಡೆಯದ ವಿಷಯನ್ನು ಪ್ರಕಟಿಸಿದ ಸಿಎಂ ಸುಖು, ‘ನಾವು ಸಂಬಳ ಪಡೆಯದಿರಲು ನಿರ್ಧರಿಸಿದ್ದೇವೆ. ಇದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದೇನಲ್ಲ. ಇದು ಆರ್ಥಿಕ ಸ್ಥಿತಿ ಸರಿದೂಗಿಸಲು ಸಾಂಕೇತಿಕ ಅಳಿಲು ಸೇವೆ ಇದ್ದಂತೆ. ಬಿಜೆಪಿ ಶಾಸಕರು ಕೂಡ ಇದನ್ನು ಅನುಸರಿಸಬೇಕು’ ಎಂದು ಆಗ್ರಹಿಸಿದರು.
ಆದರೆ ಇದನ್ನು ವಿರೋಧಿಸಿದ ವಿಪಕ್ಷ ನಾಯಕ ಜೈರಾಂ ಠಾಕೂರ್ ನೇತೃತ್ವದ ಬಿಜೆಪಿ ಶಾಸಕರು, ‘ಮದ್ಯ ನೀತಿಯಿಂದ ರಾಜ್ಯಕ್ಕೆ ಆರ್ಥಿಕ ಹೊಡೆತ ಬಿದ್ದಿದೆ. ಕಡಿಮೆ ದರದಲ್ಲಿ ಮದ್ಯದಂಗಡಿ ಲೈಸೆನ್ಸ್ ನೀಡಿದ್ದು ಇದಕ್ಕೆ ಕಾರಣ’ ಎಂದು ಹೇಳಿ ಸಭಾತ್ಯಾಗ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.