ಬೆಂಗಳೂರು: ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಹೇಳಿಕೆಯನ್ನು ಖಂಡಿಸುವ ಭರದಲ್ಲಿ ಅಕಾಲಿ ದಳ ಮುಖಂಡ ಮುಖಂಡ, ಮಾಜಿ ಸಂಸದ ಸಿಮ್ರನ್ಜಿತ್ ಮಾನ್ ಅವರು ಕಂಗನಾ ಅವರಿಗೆ ಅತ್ಯಾಚಾರದ ಅನುಭವ ಇದೆ ಎನ್ನುವ ತುಚ್ಚವಾದ ಮತ್ತು ಅತ್ಯಂತ ನಿಕೃಷ್ಟವಾದ ಹೇಳಿಕೆಯನ್ನು ನೀಡಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಿ. ಮಂಜುಳಾರವರು ತಿಳಿಸಿದ್ದಾರೆ.
ಈ ಹೇಳಿಕೆಯ ಮೂಲಕ ಒಬ್ಬ ಸಂಸದೆ ಮತ್ತು ಮಹಿಳೆಯನ್ನು ಅವಮಾನಿಸಿದ ಇವರ ನಿಷ್ಕೃಷ್ಟ ಮನಸ್ಥಿತಿಯನ್ನು ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
ಕೋಲ್ಕತ್ತದಲ್ಲಿ ಭಾರತದ ಟ್ರೈನಿ ವೈದ್ಯೆ ವಿದ್ಯಾರ್ಥಿನಿಯ ಅತ್ಯಾಚಾರ- ಹತ್ಯೆ ಪ್ರಕರಣ ಇಡೀ ದೇಶದಾದ್ಯಂತ ಆಕ್ರೋಶ ನಿರ್ಮಾಣ ಮಾಡಿರುವ ಈ ಸಂದರ್ಭದಲ್ಲಿ ಅವರು ಇಂಥ ಹೇಳಿಕೆ ಕೊಟ್ಟಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಗಳ ಸೂಕ್ಷ್ಮ ಪರಿಸ್ಥಿತಿಯನ್ನು ಗ್ರಹಿಸದೆ ಈ ಒಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದು ದುಶ್ಯಾಸನ ಮತ್ತು ದುರ್ಯೋಧನರ ಇತಿಹಾಸವನ್ನು ನೆನಪಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.