ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯತ್ವದ ಗುರಿ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರೈತ ಮೋರ್ಚಾ ರಾಜ್ಯ ಮಟ್ಟದ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕೇಂದ್ರದ ಸೂಚನೆಯಂತೆ 1.5 ಕೋಟಿ ಗುರಿ ನೀಡಿದ್ದಾರೆ. 2014ರಲ್ಲಿ 74.88 ಲಕ್ಷ, ಕಳೆದ ಸಾರಿ ಅಂದರೆ 2019ರಲ್ಲಿ 26.86 ಲಕ್ಷ ಹೆಚ್ಚುವರಿ ಸದಸ್ಯತ್ವ ಸೇರಿ ಸುಮಾರು 1 ಕೋಟಿಯಷ್ಟು ಸದಸ್ಯತ್ವ ದಾಖಲಿಸಲಾಗಿತ್ತು ಎಂದು ತಿಳಿಸಿದರು.
ರೈತ ಮೋರ್ಚಾವು ಬೂತ್ ಮಟ್ಟದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪೂರ್ಣ ಪ್ರಮಾಣದ ಶಕ್ತಿ ಸಿಗುವಂತಾಗಲು ಆರೋಗ್ಯಕರವಾದ ಚರ್ಚೆ ಮಾಡಬೇಕಿದೆ ಎಂದು ವಿವರಿಸಿದರು. ಕೇಂದ್ರದಿಂದ ರೈತಾಪಿ ಕುಟುಂಬದಿಂದ ಆಗುತ್ತಿರುವ ಅನುಕೂಲಗಳನ್ನು ರೈತ ಕುಟುಂಬಗಳಿಗೆ ತಿಳಿಸಬೇಕು ಎಂದು ಅವರು ತಿಳಿಸಿದರು.
ರೈತ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಜಯಸೂರ್ಯನ್ ಅವರು ಕನಿಷ್ಠ 10 ಲಕ್ಷ ಸದಸ್ಯತ್ವವನ್ನು ಮೀರುವಂತೆ ಕೆಲಸ ಮಾಡಲು ತಿಳಿಸಿದರು.
ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಕಲ್ಮರುಡಪ್ಪ, ಡಾ. ಬಿ.ಸಿ.ನವೀನ್ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಗುರುಲಿಂಗನಗೌಡ, ಶ್ರೀಮತಿ ಭಾರತಿ ಮಲ್ಲಿಕಾರ್ಜುನ, ಬ್ಯಾಟರಂಗೇಗೌಡ, ರಾಜ್ಯ ಕಾರ್ಯದರ್ಶಿಗಳಾದ ಆರ್. ರಾಜೇಶ್, ಸತೀಶ್ ಕಡತನಮಲೆ, ಅಶೋಕ್ ಕುಮಾರ್, ರೈತ ಮೋರ್ಚಾ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.