ನವದೆಹಲಿ: ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 4, 5 ರಂದು ಸಿಂಗಾಪುರಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಉಭಯ ದೇಶಗಳ ಉನ್ನತ ಮಂತ್ರಿಗಳ ನಡುವಿನ ಉನ್ನತ ಮಟ್ಟದ ಸಭೆಯ 15 ದಿನಗಳ ನಂತರ ಪ್ರಧಾನ ಮಂತ್ರಿಯವರ ಈ ಭೇಟಿ ಬರುತ್ತಿದ್ದು, ಮಹತ್ವ ಪಡೆದುಕೊಂಡಿದೆ.
“ಭಾರತ ಮತ್ತು ಸಿಂಗಾಪುರ ನಡುವಿನ ಸಂಬಂಧಗಳು ಸಂಪೂರ್ಣವಾಗಿ ಹೊಸ ಮಟ್ಟದ ಸಹಕಾರಕ್ಕೆ ಟೇಕ್-ಆಫ್ ಆಗಲು ಸಿದ್ಧವಾಗಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಧಾನಿಯವರ ಭೇಟಿಯ ಕುರಿತು ವಿಶೇಷ ಬ್ರೀಫಿಂಗ್ನಲ್ಲಿ ಇಂದು ತಿಳಿಸಿದೆ.
ಆರು ವರ್ಷಗಳ ನಂತರ ಪ್ರಧಾನಿ ಮೋದಿ ಸಿಂಗಾಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಭಾರತ ಮತ್ತು ಸಿಂಗಾಪುರವು ಸೆಮಿಕಂಡಕ್ಟರ್ ವಲಯದಲ್ಲಿ ತಮ್ಮ ಸಹಕಾರವನ್ನು ಗಮನಾರ್ಹವಾಗಿ ಹೆಚ್ಚಿಸಲು ನೋಡುತ್ತಿವೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಈಸ್ಟ್ ಜೈದೀಪ್ ಮಜುಂದಾರ್ ಹೇಳಿದ್ದಾರೆ.
ಪ್ರಧಾನಿಯವರ ಸಿಂಗಾಪುರ ಭೇಟಿಯು ವ್ಯಾಪಾರ ಮತ್ತು ಹೂಡಿಕೆಗೆ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
“ಸಿಂಗಾಪುರವು ASEAN ನಲ್ಲಿ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ. 2023 ರಲ್ಲಿ ಬರೋಬ್ಬರಿ 11.77 ಶತಕೋಟಿ ಡಾಲರ್ ಹೂಡಿಕೆಯೊಂದಿಗೆ ಕಳೆದ ಹಣಕಾಸು ವರ್ಷದಲ್ಲಿ ವಿದೇಶಿ ನೇರ ಹೂಡಿಕೆಯ (ಎಫ್ಡಿಐ) ಪ್ರಮುಖ ಮೂಲವಾಗಿದೆ” ಎಂದು ಅವರು ಹೇಳಿದರು.
ಸಿಂಗಾಪುರವು ವಿಶ್ವದಲ್ಲೇ ಭಾರತದ ಆರನೇ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಹೇಳಿದರು.
ಎರಡು ದಿನಗಳ ಭೇಟಿಯಲ್ಲಿ ಪ್ರಧಾನಿ ಮೋದಿ ಅವರು ಸಿಇಒಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.