ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಬ್ರೂನಿ ಮತ್ತು ಸಿಂಗಾಪುರಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದು, ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿಯು ಉಭಯ ದೇಶಗಳು ಮತ್ತು ದೊಡ್ಡ ಆಸಿಯಾನ್ ಪ್ರದೇಶದೊಂದಿಗೆ ಭಾರತದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಿರ್ಗಮನ ಹೇಳಿಕೆ ನೀಡಿರುವ ಮೋದಿ ಅವರು, ಎರಡೂ ದೇಶಗಳು ಭಾರತದ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ವಿಷನ್ನಲ್ಲಿ ಪ್ರಮುಖ ಪಾಲುದಾರರಾಗಿದ್ದಾರೆ ಎಂದರು.
ಇಂದು ಮೋದಿ ಬ್ರೂನಿ ದಾರುಸ್ಸಲಾಮ್ಗೆ ಮೊದಲ ಬಾರಿಗೆ ದ್ವಿಪಕ್ಷೀಯ ಭೇಟಿಯನ್ನು ಪ್ರಾರಂಭಿಸುತ್ತಿದ್ದು, ಭಾರತ ಮತ್ತು ಬ್ರೂನಿಯ 40 ವರ್ಷಗಳ ರಾಜತಾಂತ್ರಿಕ ಸಂಬಂಧವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ. ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಮತ್ತು ರಾಜಮನೆತನದ ಇತರ ಗೌರವಾನ್ವಿತ ಸದಸ್ಯರೊಂದಿಗೆ ಭೇಟಿಗಳನ್ನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ಬ್ರೂನಿಯಿಂದ ನಾಳೆ ಸಿಂಗಾಪುರಕ್ಕೆ ಪ್ರಯಾಣಿಸಲಿರುವ ಮೋದಿ, ಅಲ್ಲಿನ ಅಧ್ಯಕ್ಷ ಥರ್ಮನ್ ಷಣ್ಮುಗರತ್ನಂ, ಪ್ರಧಾನಿ ಲಾರೆನ್ಸ್ ವಾಂಗ್, ಹಿರಿಯ ಸಚಿವ ಲೀ ಸೀನ್ ಲೂಂಗ್ ಮತ್ತು ಹಿರಿಯ ಸಚಿವ ಗೋ ಚೋಕ್ ಟಾಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಸಿಂಗಾಪುರದ ಉದ್ಯಮ ಸಮುದಾಯದ ನಾಯಕರನ್ನು ಕೂಡ ಭೇಟಿಯಾಗಲಿದ್ದಾರೆ.
ಸಿಂಗಾಪುರದೊಂದಿಗಿನ ಕಾರ್ಯತಂತ್ರದ ಸಹಭಾಗಿತ್ವವನ್ನು ವಿಶೇಷವಾಗಿ ಸುಧಾರಿತ ಉತ್ಪಾದನೆ, ಡಿಜಿಟಲೀಕರಣ ಮತ್ತು ಸುಸ್ಥಿರ ಅಭಿವೃದ್ಧಿಯ ಹೊಸ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಆಳವಾಗಿಸಲು ಚರ್ಚಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.