ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ ಬ್ರೂನಿಯ ಬಂದರ್ ಸೆರಿ ಬೆಗವಾನ್ಗೆ ಬಂದಿಳಿದಿದ್ದಾರೆ. ಅಲ್ಲಿನ ಕ್ರೌನ್ ಪ್ರಿನ್ಸ್ ಹಾಜಿ ಅಲ್-ಮುಹ್ತದಿ ಬಿಲ್ಲಾ ಅವರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದು, ಬಳಿಕ ಬ್ರೂನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತು. ಇದು ಬ್ರೂನೈಗೆ ಭಾರತದ ಪ್ರಧಾನಿಯ ಮೊದಲ ದ್ವಿಪಕ್ಷೀಯ ಭೇಟಿಯಾಗಿದ್ದು, ಭಾರತ ಮತ್ತು ಬ್ರೂನೈ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 40 ನೇ ವಾರ್ಷಿಕೋತ್ಸವದ ಸಂದರ್ಭದಲ್ಲೇ ಈ ಭೇಟಿ ನಡೆದಿರುವುದು ವಿಶೇಷ.
ತಮ್ಮ ಭೇಟಿಯ ಎರಡನೇ ಹಂತದಲ್ಲಿ, ಮೋದಿ ಅವರು ಸೆಪ್ಟೆಂಬರ್ 4 ರಿಂದ 5 ರವರೆಗೆ ಸಿಂಗಾಪುರಕ್ಕೆ ಪ್ರಯಾಣಿಸಲಿದ್ದಾರೆ. ತಮ್ಮ ನಿರ್ಗಮನದ ಹೇಳಿಕೆಯಲ್ಲಿ, ಮೋದಿ ಅವರು ತಮ್ಮ ಅವಳಿ ಭೇಟಿಗಳ ಗಮನವು ಉಭಯ ದೇಶಗಳೊಂದಿಗಿನ ಭಾರತದ ಸಂಬಂಧವನ್ನು ಇನ್ನಷ್ಟು ಗಾಢಗೊಳಿಸುವುದರ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹೇಳಿದರು.
“ಭಾರತ-ಬ್ರೂನೈ ದಾರುಸ್ಸಲಾಮ್ ರಾಜತಾಂತ್ರಿಕ ಸಂಬಂಧಗಳು 40 ಅದ್ಭುತ ವರ್ಷಗಳನ್ನು ಪೂರೈಸಿವೆ. ನಾನು ಹಿಸ್ ಮೆಜೆಸ್ಟಿ ಸುಲ್ತಾನ್ ಹಾಜಿ ಹಸ್ಸಾನಲ್ ಬೊಲ್ಕಿಯಾ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ” ಎಂದು ಅವರು ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ತಮ್ಮ ನಿರ್ಗಮನ ಹೇಳಿಕೆಯಲ್ಲಿ, ಬ್ರೂನೈ ಮತ್ತು ಸಿಂಗಾಪುರಕ್ಕೆ ಭೇಟಿ ನೀಡಿರುವುದು ಉಭಯ ದೇಶಗಳು ಮತ್ತು ದೊಡ್ಡ ಆಸಿಯಾನ್ ಪ್ರದೇಶದೊಂದಿಗೆ ಭಾರತದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಶ್ರೀ ಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಭಾರತದ ಆಕ್ಟ್ ಈಸ್ಟ್ ಪಾಲಿಸಿ ಮತ್ತು ಇಂಡೋ-ಪೆಸಿಫಿಕ್ ವಿಷನ್ನಲ್ಲಿ ಎರಡೂ ದೇಶಗಳು ಪ್ರಮುಖ ಪಾಲುದಾರರಾಗಿದ್ದಾರೆ ಎಂದು ಅವರು ಹೇಳಿದರು. ಭಾರತ ಮತ್ತು ಬ್ರೂನೈ ರಾಜತಾಂತ್ರಿಕ ಸಂಬಂಧದ 40 ವರ್ಷಗಳ ಸಂಭ್ರಮಾಚರಣೆಯಲ್ಲಿ, ಸುಲ್ತಾನ್ ಹಾಜಿ ಹಸನಲ್ ಬೊಲ್ಕಿಯಾ ಮತ್ತು ರಾಜಮನೆತನದ ಇತರ ಗೌರವಾನ್ವಿತ ಸದಸ್ಯರೊಂದಿಗೆ ಅವರ ಭೇಟಿಗಳನ್ನು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.