ಸಿಂಗಾಪುರ: ಆರೋಗ್ಯ ಮತ್ತು ಔಷಧ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ, ಡಿಜಿಟಲ್ ತಂತ್ರಜ್ಞಾನಗಳು ಮತ್ತು ಸೆಮಿಕಂಡಕ್ಟರ್ ಇಕೋಸಿಸ್ಟಮ್ ಪಾಲುದಾರಿಕೆ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಇಂದು ಭಾರತ ಮತ್ತು ಸಿಂಗಾಪುರವು ನಾಲ್ಕು ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡಿವೆ.
ಉಭಯ ದೇಶಗಳು ತಮ್ಮ ಸಂಬಂಧಗಳನ್ನು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಏರಿಸಲು ಒಪ್ಪಿಕೊಂಡಿದ್ದು, ಇದು ಭಾರತದ ಪೂರ್ವ ನೀತಿಗೆ ಪ್ರಮುಖ ಉತ್ತೇಜನವನ್ನು ನೀಡುತ್ತದೆ. ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಂಗಾಪುರದ ಪ್ರಧಾನಿ ಲಾರೆನ್ಸ್ ವಾಂಗ್ ನಡುವಿನ ನಿಯೋಗ ಮಟ್ಟದ ಮಾತುಕತೆಯ ನಂತರ ಇದನ್ನು ನಿರ್ಧರಿಸಲಾಗಿದೆ.
ಸಿಂಗಾಪುರದಲ್ಲಿ ನಡೆದ ಮಾತುಕತೆಯಲ್ಲಿ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಪರಿಶೀಲಿಸಿದರು. ಆರ್ಥಿಕ ಸಂಬಂಧಗಳಲ್ಲಿನ ದೃಢವಾದ ಪ್ರಗತಿಯ ಪರಿಶೀಲನೆ ನಡೆಸಿದರು, ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ಹೂಡಿಕೆಯ ಹರಿವನ್ನು ಮತ್ತಷ್ಟು ವಿಸ್ತರಿಸಲು ಎರಡೂ ಕಡೆಯವರು ಕರೆ ನೀಡಿದರು.
ಭಾರತದ ಆರ್ಥಿಕತೆಯಲ್ಲಿ ಸುಮಾರು 160 ಬಿಲಿಯನ್ ಯುಎಸ್ ಡಾಲರ್ ಹೂಡಿಕೆಯೊಂದಿಗೆ ಸಿಂಗಾಪುರವು ಭಾರತದ ಪ್ರಮುಖ ಆರ್ಥಿಕ ಪಾಲುದಾರ ಎಂದ ಪ್ರಧಾನಿ, ಭಾರತದಲ್ಲಿ ತ್ವರಿತ ಮತ್ತು ನಿರಂತರ ಬೆಳವಣಿಗೆಯು ಸಿಂಗಾಪುರದ ಘಟಕಗಳಿಗೆ ಅಪಾರ ಹೂಡಿಕೆ ಅವಕಾಶಗಳನ್ನು ತೆರೆದಿದೆ ಎಂದು ಅವರು ಹೇಳಿದರು.
ರಕ್ಷಣಾ ಮತ್ತು ಭದ್ರತೆ, ಕಡಲ ಡೊಮೇನ್ ಜಾಗೃತಿ, ಶಿಕ್ಷಣ, AI, ಫಿನ್ಟೆಕ್, ಹೊಸ ತಂತ್ರಜ್ಞಾನ ಕ್ಷೇತ್ರಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಜ್ಞಾನ ಪಾಲುದಾರಿಕೆ ಕ್ಷೇತ್ರಗಳಲ್ಲಿ ಅಸ್ತಿತ್ವದಲ್ಲಿರುವ ಸಹಕಾರವನ್ನು ಇಬ್ಬರೂ ಪ್ರಧಾನ ಮಂತ್ರಿಗಳು ಪರಿಶೀಲಿಸಿದರು. ಉಭಯ ನಾಯಕರು ಆರ್ಥಿಕ ಮತ್ತು ಜನರ ನಡುವಿನ ಸಂಬಂಧವನ್ನು ಹೆಚ್ಚಿಸಲು ದೇಶಗಳ ನಡುವಿನ ಸಂಪರ್ಕವನ್ನು ಬಲಪಡಿಸಲು, ಹಸಿರು ಕಾರಿಡಾರ್ ಯೋಜನೆಗಳ ವೇಗವರ್ಧನೆಗೆ ಅವರು ಕರೆ ನೀಡಿದರು.
ಕಳೆದ ತಿಂಗಳು ಸಿಂಗಾಪುರದಲ್ಲಿ ನಡೆದ 2ನೇ ಭಾರತ-ಸಿಂಗಾಪುರ ಸಚಿವರ ದುಂಡುಮೇಜಿನ ಫಲಿತಾಂಶದ ಕುರಿತು ಉಭಯ ನಾಯಕರು ಚರ್ಚಿಸಿದರು. ಅವರ ಚರ್ಚೆಯು 2025 ರಲ್ಲಿ ದ್ವಿಪಕ್ಷೀಯ ಸಂಬಂಧಗಳ 60 ನೇ ವಾರ್ಷಿಕೋತ್ಸವದ ಆಚರಣೆಯನ್ನು ಒಳಗೊಂಡಿತ್ತು. ಸಭೆಯಲ್ಲಿ, ಭಾರತ-ಆಸಿಯಾನ್ ಸಂಬಂಧಗಳು ಮತ್ತು ಇಂಡೋ-ಪೆಸಿಫಿಕ್ಗೆ ಭಾರತದ ದೃಷ್ಟಿ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.