ನವದೆಹಲಿ: ಮೂರು ದಿನಗಳ ಸಿಂಗಾಪುರ ಮತ್ತು ಬ್ರೂನಿ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ.
ಪಿಎಂ ಮೋದಿ ತಮ್ಮ ಸಿಂಗಾಪುರ್ ಭೇಟಿಯ ವೀಡಿಯೊವನ್ನು ಎಕ್ಸ್ನಲ್ಲಿ ಹಂಚಿಕೊಂಡಿದದು, “ನನ್ನ ಸಿಂಗಾಪುರದ ಭೇಟಿಯು ಬಹಳ ಫಲಪ್ರದವಾಗಿದೆ. ಇದು ಖಂಡಿತವಾಗಿಯೂ ದ್ವಿಪಕ್ಷೀಯ ಸಂಬಂಧಗಳಿಗೆ ಚೈತನ್ಯವನ್ನು ನೀಡುತ್ತದೆ ಮತ್ತು ನಮ್ಮ ರಾಷ್ಟ್ರಗಳ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ನಾನು ಸಿಂಗಾಪುರದ ಸರ್ಕಾರ ಮತ್ತು ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ.
ಇಂದು ಮುಂಜಾನೆ ಸಿಂಗಾಪುರದ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಮತ್ತು ಸಿಂಗಾಪುರ ಪ್ರಧಾನಿ ಲಾರೆನ್ಸ್ ವಾಂಗ್ ಭೇಟಿಯಾದರು.
ಇಬ್ಬರು ನಾಯಕರು ತಮ್ಮ ನಿಯೋಗಗಳೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಅವರ ಮಾತುಕತೆಯಲ್ಲಿ, ಇಬ್ಬರೂ ನಾಯಕರು ಭಾರತ-ಸಿಂಗಪುರ ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಪರಿಶೀಲಿಸಿದರು. ಇದರ ನಂತರ, ಡಿಜಿಟಲ್ ತಂತ್ರಜ್ಞಾನ, ಸೆಮಿಕಂಡಕ್ಟರ್ಗಳು, ಕೌಶಲ್ಯ ಅಭಿವೃದ್ಧಿ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಎರಡು ಕಡೆಯವರು ನಾಲ್ಕು ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಂಡರು.
ಪ್ರಧಾನಿ ಮೋದಿ ಅವರು ಪ್ರಧಾನಿ ಲಾರೆನ್ಸ್ ವಾಂಗ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು, ಅದನ್ನು ವಾಂಗ್ ಒಪ್ಪಿಕೊಂಡರು. ಎಇಎಂ ಹೋಲ್ಡಿಂಗ್ಸ್ ಲಿಮಿಟೆಡ್ನ ಸೆಮಿಕಂಡಕ್ಟರ್ ಸೌಲಭ್ಯಕ್ಕೂ ಪ್ರಧಾನಿ ಮೋದಿ ಭೇಟಿ ನೀಡಿದರು.
ಸೆಪ್ಟೆಂಬರ್ 11-13 ರವರೆಗೆ ಗ್ರೇಟರ್ ನೋಯ್ಡಾದಲ್ಲಿ ನಡೆಯಲಿರುವ ಸೆಮಿಕಾನ್ ಇಂಡಿಯಾ ಪ್ರದರ್ಶನದಲ್ಲಿ ಭಾಗವಹಿಸಲು ಸಿಂಗಾಪುರದ ಸೆಮಿಕಂಡಕ್ಟರ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.