ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ, ಇಸ್ರೇಲ್-ಹಮಾಸ್ ಸಂಘರ್ಷಗಳು ಮತ್ತು ಬಾಂಗ್ಲಾದೇಶದ ಪ್ರಸ್ತುತ ಪರಿಸ್ಥಿತಿಯಂತಹ ಘಟನೆಗಳನ್ನು ವಿಶ್ಲೇಷಿಸಲು ಮತ್ತು ಯಾವುದೇ ಅನಿರೀಕ್ಷಿತ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಶಸ್ತ್ರ ಪಡೆಗಳ ಉನ್ನತ ಕಮಾಂಡರ್ಗಳಿಗೆ ಕರೆ ನೀಡಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಜಂಟಿ ಕಮಾಂಡರ್ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತ ಶಾಂತಿ ಪ್ರಿಯ ರಾಷ್ಟ್ರವಾಗಿದ್ದು, ಶಾಂತಿ ಕಾಪಾಡಲು ಸಶಸ್ತ್ರ ಪಡೆಗಳು ಯುದ್ಧಕ್ಕೆ ಸಜ್ಜಾಗಬೇಕಿದೆ. ಉತ್ತರದ ಗಡಿಯಲ್ಲಿನ ಪರಿಸ್ಥಿತಿ ಮತ್ತು ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಬೆದರಿಕೆಯೊಡ್ಡುತ್ತಿರುವ ನೆರೆಯ ದೇಶಗಳಲ್ಲಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಹಿರಿಯ ಮಿಲಿಟರಿ ನಾಯಕತ್ವದಿಂದ ಹೆಚ್ಚು ಸಮಗ್ರ ಮತ್ತು ಆಳವಾದ ವಿಶ್ಲೇಷಣೆ ಅಗತ್ಯವಾಗಿದೆ ಎಂದಿದ್ದಾರೆ.
ಬುಧವಾರ ಆರಂಭವಾದ ಸಮ್ಮೇಳನವು ದೇಶದ ಅತ್ಯುನ್ನತ ಮಟ್ಟದ ಮಿಲಿಟರಿ ನಾಯಕತ್ವವನ್ನು ಒಟ್ಟುಗೂಡಿಸಿದ್ದು, ರಾಷ್ಟ್ರೀಯ ಭದ್ರತೆ, ರಾಷ್ಟ್ರಕ್ಕೆ ಪ್ರಸ್ತುತ ಮತ್ತು ಭವಿಷ್ಯದ ಸವಾಲುಗಳ ಕುರಿತು ಇಲ್ಲಿ ಚರ್ಚೆ ನಡೆದಿದೆ.
ರಕ್ಷಣಾ ಸಚಿವರು ಇ-ಮ್ಯೂಸಿಯಂ ಮತ್ತು ಇ-ಗ್ರಂಥಾಲಯ ಸೇರಿದಂತೆ ಎಂಟು ನವೀನ ಅಪ್ಲಿಕೇಶನ್ಗಳನ್ನು ಪ್ರಾರಂಭಿಸಿದರು, ಜೊತೆಗೆ “ವಸಾಹತುಶಾಹಿ ಅಭ್ಯಾಸಗಳು ಮತ್ತು ಸಶಸ್ತ್ರ ಪಡೆಗಳು: ಒಂದು ವಿಮರ್ಶೆ” ಎಂಬ ಶೀರ್ಷಿಕೆಯ ಪ್ರಕಟಣೆಯೊಂದಿಗೆ ಮೂರು ಸೇವೆಗಳ ನಡುವೆ ಹೆಚ್ಚಿನ ಒಗ್ಗಟ್ಟು ಮತ್ತು ಸಮನ್ವಯದ ಮಹತ್ವದ ಹೆಜ್ಜೆಯನ್ನು ಗುರುತಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.