ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾವರಣಗೊಳಿಸಿದರು.
ಈ ವೇಳೆ ಮಾತನಾಡಿದ ಅವರು, ಹಿಂದೆ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ಈಗ ಇತಿಹಾಸವಾಗಿದೆ. ಅದರ ಮರುಸ್ಥಾಪನೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
2019ರಲ್ಲಿ ರದ್ದಾದ 370ನೇ ವಿಧಿಯನ್ನು ಮರುಸ್ಥಾಪಿಸುವ ಕುರಿತು ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿರುವ ನ್ಯಾಷನಲ್ ಕಾನ್ಫರೆನ್ಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. 2014 ರಿಂದ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ ಭಾರೀ ಮಹತ್ವ ಪಡೆದುಕೊಂಡಿದೆ.
“2014 ರವರೆಗೆ, ಪ್ರತ್ಯೇಕತಾವಾದ ಮತ್ತು ಭಯೋತ್ಪಾದನೆಯ ನೆರಳು ಜಮ್ಮು ಮತ್ತು ಕಾಶ್ಮೀರದ ಮೇಲೆ ಆವರಿಸಿತ್ತು. ವಿವಿಧ ರಾಜ್ಯ ಮತ್ತು ರಾಜ್ಯೇತರ ನಾಯಕರು ಅದನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದರು ಮತ್ತು ಸರ್ಕಾರಗಳು ತುಷ್ಟೀಕರಣದ ನೀತಿಯನ್ನು ಅಳವಡಿಸಿಕೊಂಡವು. ಆದರೆ, ಭಾರತ ಮತ್ತು ಜಮ್ಮು-ಕಾಶ್ಮೀರದ ಇತಿಹಾಸವನ್ನು ಬರೆಯುವಾಗಲೆಲ್ಲಾ, 2014 ಮತ್ತು 2024 ರ ನಡುವಿನ ವರ್ಷಗಳನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುವುದು”ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.