ಜಮ್ಮು: ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರನ್ನು ಭಾರತ ತನ್ನ ಸ್ವಂತ ಪ್ರಜೆಗಳೆಂದು ಪರಿಗಣಿಸಿದರೆ ಪಾಕಿಸ್ತಾನ ಸರ್ಕಾರ ಅವರನ್ನು ‘ವಿದೇಶಿಯರು’ ಎಂದು ಕರೆಯುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಜಮ್ಮು ವಿಭಾಗದ ರಾಂಬನ್ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, “ಮೆಹಬೂಬಾ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಾವು ಅಪ್ರಬುದ್ಧರಾಗಿದ್ದೆವು ಮತ್ತು ಅಮಾಯಕರ ಮೇಲಿನ ಪ್ರಕರಣಗಳನ್ನು ಹಿಂಪಡೆದಿದ್ದೆವು. ಆದರೆ ಸಮಸ್ಯೆಯೆಂದರೆ ಪಿಡಿಪಿ ಪ್ರತ್ಯೇಕತಾವಾದಿಗಳ ಬಗ್ಗೆ ಸಹಾನುಭೂತಿ ಹೊಂದಿತ್ತು. ನೆಲದ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನು ಯಾವಾಗಲೂ ಅವರಿಗೆ ಹೇಳುತ್ತಿದ್ದೆ, ಆದರೆ ಅವರಿಗೆ ಸಾಧ್ಯವಾಗಲಿಲ್ಲ. ಜಮ್ಮು-ಕಾಶ್ಮೀರ ಜನರು ಭಾರತದ ಮುಕ್ತ ಪ್ರಜೆಗಳು ಮತ್ತು ಅವರಿಗೆ ಶಾಂತಿ ಮತ್ತು ಸಮೃದ್ಧಿಯ ಹಕ್ಕಿದೆ” ಎಂದಿದ್ದಾರೆ.
ಇತ್ತೀಚಿನ ಅಫಿಡವಿಟ್ನಲ್ಲಿ, ಪಾಕಿಸ್ತಾನದ ಸಾಲಿಸಿಟರ್ ಜನರಲ್ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರನ್ನು ‘ವಿದೇಶಿಯರು’ ಎಂದು ಕರೆದಿದ್ದಾರೆ. ಆದರೆ ನಾವು ಅವರನ್ನು ವಿದೇಶಿಯರೆಂದು ಕರೆಯುವುದಿಲ್ಲ. ಅವರು ನಮ್ಮ ಜನ. ಅವರು ಸೇರಲಿ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಯಾದ ನಂತರ, ಪಿಒಕೆ ಜನರು ಭಾರತಕ್ಕೆ ಬಂದು ಸೇರಲು ಬಯಸುತ್ತಾರೆ” ಎಂದು ಅವರು ಪ್ರತಿಪಾದಿಸಿದರು.
ಅಫ್ಜಲ್ ಗುರುವನ್ನು ಗಲ್ಲಿಗೇರಿಸಬಾರದಿತ್ತು ಎಂದು ಹೇಳಿರುವ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ರಾಜನಾಥ್ ತೀವ್ರವಾಗಿ ಟೀಕಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.