ಜಮ್ಮು: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ನಡೆಸಿದ ಪ್ರಮುಖ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದು, ಇಬ್ಬರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಸೋಮವಾರ ಹತ್ಯೆಗೈಯಲಾಗಿದೆ. ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ಮೂಲಕ ಭಯೋತ್ಪಾದಕರ ಗುಂಪೊಂದು ಭಾರತದ ಭೂಪ್ರದೇಶವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಗಡಿ ನಿಯಂತ್ರಣ ರೇಖೆ ಬಳಿ ಭಯೋತ್ಪಾದಕರ ಚಲನವಲನ ಕಂಡು ಬಂದ ನಂತರ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿ ಅವರನ್ನು ಸಂಹಾರ ಮಾಡಿದೆ. ಲಾಮ್ ಪ್ರದೇಶದಲ್ಲಿನ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ ಪರಿಣಾಮವಾಗಿ ದೊಡ್ಡ ಮಟ್ಟದ ಕುಕೃತ್ಯವೊಂದು ತಪ್ಪಿದಂತಾಗಿದೆ. ಹೆಚ್ಚಿನ ಭದ್ರತಾ ಪಡೆಗಳನ್ನು ನೌಶೇರಾ ಕಾರ್ಯಾಚರಣೆಯ ಸ್ಥಳಕ್ಕೆ ಕಳುಹಿಸಲಾಗಿದೆ.
ಭಾರತೀಯ ಸೇನೆಯು ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.
ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿಯಲ್ಲಿ ಭಾರತ-ಪಾಕಿಸ್ತಾನ ಗಡಿಯ ನೌಶೇರಾ ಸೆಕ್ಟರ್ನಲ್ಲಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆಯನ್ನು ಸೇನೆ ನಡೆಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.