ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಸೌದಿ ಅರೇಬಿಯಾ ಮತ್ತು ಕತಾರ್ನ ನಾಯಕರನ್ನು ಭೇಟಿ ಮಾಡಿ, ದ್ವಿಪಕ್ಷೀಯ ಸಂಬಂಧಗಳ ಪ್ರಗತಿಯನ್ನು ಪರಿಶೀಲಿಸಿದರು ಮತ್ತು ಅವುಗಳನ್ನು ಇನ್ನಷ್ಟು ಗಾಢಗೊಳಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.
ಭಾರತ-ಗಲ್ಫ್ ಸಹಕಾರ ಮಂಡಳಿ (ಜಿಸಿಸಿ) ವಿದೇಶಾಂಗ ಸಚಿವರ ಮೊದಲ ಸಭೆಯಲ್ಲಿ ಭಾಗವಹಿಸಲು ಜೈಶಂಕರ್ ಅವರು ಎರಡು ದಿನಗಳ ಭೇಟಿಗಾಗಿ ಭಾನುವಾರ ಸೌದಿ ರಾಜಧಾನಿಗೆ ಆಗಮಿಸಿದರು. ಅವರು ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರನ್ನು ಭೇಟಿ ಮಾಡಿದರು ಮತ್ತು ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿ ಕುರಿತು ಚರ್ಚಿಸಿದರು.
“ಇಂದು ರಿಯಾದ್ನಲ್ಲಿ ಸೌದಿ ಅರೇಬಿಯಾದ ವಿದೇಶಾಂಗ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರನ್ನು ಭೇಟಿ ಮಾಡಲು ಸಂತೋಷವಾಯಿತು. ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿನ ಪ್ರಗತಿಯ ಬಗ್ಗೆ ಪರಿಶೀಲಿಸಿದೆವು ಮತ್ತು ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ದೃಷ್ಟಿಕೋನಗಳನ್ನು ಹಂಚಿಕೊಂಡೆವು. ಭಾರತದಲ್ಲಿ ಅವರನ್ನು ಸ್ವಾಗತಿಸಲು ಎದುರುನೋಡುತ್ತೇನೆ” ಎಂದು ಜೈಶಂಕರ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಜೈಶಂಕರ್ ಅವರು ಕತಾರ್ನ ಪ್ರಧಾನಿ ಮೊಹಮ್ಮದ್ ಬಿನ್ ಅಬ್ದುಲ್ರಹ್ಮಾನ್ ಬಿನ್ ಜಸ್ಸಿಮ್ ಅಲ್ ಥಾನಿ ಅವರನ್ನು ಭೇಟಿ ಮಾಡಿದರು ಮತ್ತು ಭಾರತ-ಕತಾರ್ ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯುವ ಕುರಿತು ಚರ್ಚಿಸಲಾಗಿದೆ. ಪ್ರಾದೇಶಿಕ ಬೆಳವಣಿಗೆಗಳ ಕುರಿತು ಅವರ ಆಸಕ್ತಿಯನ್ನು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.