ಚೆನ್ನೈ: ಕಳೆದ ಮೂರು ವರ್ಷಗಳಲ್ಲಿ ನಾಲ್ಕು ಜನರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮಂಜದ ಜೊತೆ (ದಾರ ಸುತ್ತುವ ಸಲಕರಣೆ) ಗಾಳಿಪಟ ಹಾರಿಸುವುದನ್ನು ಚೆನ್ನೈನಲ್ಲಿ ನಿಷೇಧಿಸಿ ಪೊಲೀಸ್ ಆಯುಕ್ತ ಎಸ್. ಜಾರ್ಜ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ನಗರ ಪೊಲೀಸ್ ಕಾಯ್ದೆ ಸೆಕ್ಷನ್ 71ರ ಅಡಿಯಲ್ಲಿ ನಿಷೇಧ ಜಾರಿಗೊಳಿಸಲಾಗಿತ್ತು. ಆದರೆ ಖಂಡನೀಯ ನರಹಂತಕ ಆಪಾದನೆಯೂ ಸೇರಿದಂತೆ ಹಲವು ಆರೋಪಗಳ ಅಡಿಯಲ್ಲಿ ಮೊದಲ ಬಾರಿಗೆ ನಿಷೇಧಾಜ್ಞೆ ಆದೇಶ ಜಾರಿಗೊಳಿಸಲಾಗಿದೆ.
’ಮಂಜ’ಗೆ ಬಲಿಯಾಗಿರುವ ಪೆರಂಬೂರ್ನ 5 ವರ್ಷದ ಬಾಲಕ ಅಜಯ್ ಸಾವಿನ ಬಳಿಕ ಮುಂದಿನ 60 ದಿನಗಳಿಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆಯನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳೆದ ಮೂರು ವರ್ಷಗಳಲ್ಲಿ 4 ಜನರು ಸಾವನ್ನಪ್ಪಿದ್ದಲ್ಲದೇ 14 ಮಂದಿ ಅಪಘಾತಕ್ಕೀಡಾಗಿದ್ದಾರೆ. ಈ ಸಂಬಂಧ ಇದರ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಇದರ ಉಲ್ಲಂಘನೆ ಮಾಡಿದಲ್ಲಿ ಬಂಧಿತರು ಆರು ವರ್ಷ ಜೈಲು ಶಿಕ್ಷೆಯ ಜೊತೆಗೆ ಇತರರ ಜೀವ ಮತ್ತು ವೈಯಕ್ತಿಕ ಸುರಕ್ಷತೆಯನ್ನು ಆಪಾಯಕ್ಕೆ ಸಿಲುಕಿಸಿರುವ ಆರೋಪದಡಿ ಶಿಕ್ಷೆ ವಿಧಿಸಲಾಗುವುದು ಎಂದು ಜಾರ್ಜ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.