ನವದೆಹಲಿ: ಕ್ಯಾನ್ಸರ್ ಔಷಧಿಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು 12% ರಿಂದ 5% ಕ್ಕೆ ಇಳಿಸಲು ಜಿಎಸ್ಟಿ ಕೌನ್ಸಿಲ್ ನಿರ್ಧರಿಸಿದೆ. ನಿನ್ನೆ ದೆಹಲಿಯಲ್ಲಿ ನಡೆದ 54ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ರಾಜ್ಯಗಳ ಹಣಕಾಸು ಸಚಿವರು ಉಪಸ್ಥಿತರಿದ್ದರು.
ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ನಿರ್ಮಲಾ ಸೀತಾರಾಮನ್, ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್ಟಿ ದರವನ್ನು ಕಡಿಮೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆಯ್ದ ತಿಂಡಿಗಳ ಮೇಲಿನ ಜಿಎಸ್ಟಿಯನ್ನು 18% ರಿಂದ 12% ಕ್ಕೆ ಇಳಿಸಲಾಗಿದೆ ಎಂದು ಅವರು ಹೇಳಿದರು.
ಕೇಂದ್ರ, ರಾಜ್ಯ ಸರ್ಕಾರಗಳ ಕಾನೂನಿನನ್ವಯ ಸ್ಥಾಪಿಸಿರುವ ವಿಶ್ವವಿದ್ಯಾಲಯಗಳು ಮತ್ತು ಆದಾಯ ತೆರಿಗೆ ವಿನಾಯಿತಿ ಪಡೆದಿರುವ ವಿಶ್ವವಿದ್ಯಾಲಯಗಳಿಗೆ ಸಂಶೋಧನೆಗೆ ನೀಡುವ ಹಣಕಾಸುಗಳಿಗೆ ಜಿಎಸ್ಟಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಜೀವ ಮತ್ತು ಆರೋಗ್ಯ ವಿಮೆಯ ಮೇಲಿನ ತೆರಿಗೆ ದರವನ್ನು ಕಡಿಮೆ ಮಾಡುವ ಕುರಿತು ಜಿಎಸ್ಟಿ ಕೌನ್ಸಿಲ್ ಮಂತ್ರಿಗಳ ಗುಂಪನ್ನು ಸ್ಥಾಪಿಸಲು ನಿರ್ಧರಿಸಿದೆ. ವೈದ್ಯಕೀಯ ಆರೋಗ್ಯ ವಿಮೆ ಮೇಲಿನ ಜಿಎಸ್ಟಿ ದರ ಕಡಿತದ ಕುರಿತು ಸಚಿವರ ಗುಂಪು ಈ ವರ್ಷದ ಅಕ್ಟೋಬರ್ ಅಂತ್ಯದೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಮತ್ತು ನವೆಂಬರ್ನಲ್ಲಿ ನಡೆಯಲಿರುವ ಸಭೆಯು ದರ ಕಡಿತದ ವಿಷಯದ ಬಗ್ಗೆ ನಿರ್ಧರಿಸಲಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.