ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಅತಿ ಶೀಘ್ರದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಅವರ ಕಚೇರಿ ಮಂಗಳವಾರ ಪ್ರಕಟಿಸಿದೆ. ನವೆಂಬರ್, 2023 ರಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮುಯಿಝು ಅವರ ಮೊದಲ ಅಧಿಕೃತ ಭಾರತ ಭೇಟಿಗಾಗಿ ದಿನಾಂಕವನ್ನು ಅಂತಿಮಗೊಳಿಸಲು ಉಭಯ ಕಡೆಯವರು ಎದುರು ನೋಡುತ್ತಿದ್ದಾರೆ.
ವಿಶೇಷವೆಂದರೆ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮುಯಿಝು ಸರ್ಕಾರದ ಇಬ್ಬರು ಕಿರಿಯ ಸಚಿವರು ಸರ್ಕಾರಕ್ಕೆ ರಾಜೀನಾಮೆ ನೀಡಿದ ದಿನವೇ ಈ ಘೋಷಣೆ ಹೊರಬಿದ್ದಿದೆ.
ಈ ವರ್ಷದ ಜೂನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಯಿಝು ಅವರು ಪಾಲ್ಗೊಂಡಿದ್ದರು ಮತ್ತು ಕಳೆದ ತಿಂಗಳು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮಾಲೆಗೆ ಭೇಟಿ ನೀಡಿದ್ದರು.
ಮುಯಿಝು ಅವರು ಚೀನಾ ಪರವಾಗಿದ್ದು, ಅಧಿಕಾರಕ್ಕೆ ಬಂದ ಕೂಡಲೇ ತಮ್ಮ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಯನ್ನು ವಾಪಾಸ್ ಕಳುಹಿಸುವಂತೆ ಆದೇಶಿಸಿದ್ದರು. ಅಧ್ಯಕ್ಷರಾಗಿ ಮುಯಿಝು ಅವರು ಕಳೆದ ವರ್ಷ ತೆಗೆದುಕೊಂಡ ನಿರ್ಧಾರವು ಭಾರತ-ಮಾಲ್ಡೀವ್ಸ್ ಸಂಬಂಧವನ್ನು ಹಳಿತಪ್ಪಿಸುವ ಬೆದರಿಕೆಯನ್ನುಂಟು ಮಾಡಿದೆ. ಆದರೆ ಭಾರತವು ಮಿಲಿಟರಿ ಸಿಬ್ಬಂದಿಯನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ನಾಗರಿಕ ಉದ್ಯೋಗಿಗಳೊಂದಿಗೆ ಬದಲಾಯಿಸಿದಾಗಿನಿಂದ ಪರಿಸ್ಥಿತಿ ಸುಧಾರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.