ನವದೆಹಲಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನ ಭಾರತೀಯ ತಂಡವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿತು.
ವಿವಿಧ ಪಂದ್ಯಗಳಲ್ಲಿ ದಾಖಲೆ ನಿರ್ಮಿಸುವ ಪ್ರದರ್ಶನ ನೀಡಿರುವ ಆಟಗಾರರು ಭಾರತಕ್ಕೆ ಮರಳಿದ್ದಾರೆ. ಏಳು ಚಿನ್ನ, ಒಂಬತ್ತು ಬೆಳ್ಳಿ, 13 ಕಂಚಿನ ಪದಕ ಸೇರಿದಂತೆ 29 ಪದಕಗಳನ್ನು ಭಾರತ ತಂಡ ಗೆದ್ದುಕೊಂಡಿದೆ.
“ನಾವು ಬಹಳಷ್ಟು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಅವರು ನಮ್ಮೊಂದಿಗೆ ವೈಯಕ್ತಿಕವಾಗಿ ಮಾತನಾಡಿದರು. ನಾನು ಯಾವಾಗಲೂ ಪ್ರಧಾನಿ ಮೋದಿಯನ್ನು ವೈಯಕ್ತಿಕವಾಗಿ ಭೇಟಿಯಾಗಲು ಬಯಸಿದ್ದೆ ಮತ್ತು ಈಗ ನನಗೆ ಈ ಅವಕಾಶ ಸಿಕ್ಕಿದೆ. ಅವರು ನನ್ನ ಮಕ್ಕಳು ಮತ್ತು ನನ್ನ ಕುಟುಂಬದ ಬಗ್ಗೆ ಕೇಳಿದರು. ಇದು ನಿಜವಾಗಿಯೂ ಒಳ್ಳೆಯ ಭಾವನೆ. ದೇಶದ ಪ್ರಧಾನಿಗೆ ನಮ್ಮ ಕುಟುಂಬಗಳ ಬಗ್ಗೆ ಚೆನ್ನಾಗಿ ತಿಳಿದಿದೆ” ಎಂದು ಮೋನಾ ಅಗರ್ವಾಲ್ ಹೇಳಿದ್ದಾರೆ.
ಅಗರ್ವಾಲ್ ಪ್ಯಾರಾಲಿಂಪಿಕ್ನಲ್ಲಿ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ಎಚ್ 1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ, ಯುವ ವ್ಯವಹಾರಗಳು ಮತ್ತು ಕ್ರೀಡಾ ರಾಜ್ಯ ಸಚಿವ ರಕ್ಷಾ ನಿಖಿಲ್ ಖಡ್ಸೆ ಮತ್ತು ಪ್ಯಾರಾಲಿಂಪಿಕ್ ಸಮಿತಿ ಆಫ್ ಇಂಡಿಯಾ (ಪಿಸಿಐ) ಅಧ್ಯಕ್ಷ ದೇವೇಂದ್ರ ಝಜಾರಿಯಾ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತೆ ಅವನಿ ಲೆಖರಾ ಅವರು ಸಹಿ ಮಾಡಿದ ಭಾರತೀಯ ಜೆರ್ಸಿಯನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಿದರು.
VIDEO | PM Modi (@narendramodi) interacted with members of Indian Paralympic Games Paris 2024 contingent at his residence in Delhi, earlier today.
(Source: Third Party)
(Full video available on PTI Videos – https://t.co/n147TvqRQz) pic.twitter.com/tVmC2yI1YT
— Press Trust of India (@PTI_News) September 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.