ನವದೆಹಲಿ: ಇತ್ತೀಚೆಗೆ ಅನುಮೋದಿಸಲಾದ ಪ್ರಧಾನ ಮಂತ್ರಿ ಇ ಬಸ್ ಸೇವಾ-ಪಾವತಿ ಭದ್ರತಾ ವ್ಯವಸ್ಥೆ (ಪಿಎಸ್ಎಂ) ಯೋಜನೆಯು ಹಣಕಾಸು ವರ್ಷ 2025-26 ರಿಂದ ಹಣಕಾಸು ವರ್ಷ 2028-29ರ ನಡುವೆ 38,000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಗಳ ನಿಯೋಜನೆಯನ್ನು ಬೆಂಬಲಿಸುತ್ತದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಾರ್ವಜನಿಕ ಸಾರಿಗೆ ಪ್ರಾಧಿಕಾರ(ಪಿಟಿಎ)ದಿಂದ ನಡೆಸಲ್ಪಡುವ ಇ-ಬಸ್ಗಳ ಖರೀದಿ ಮತ್ತು ಕಾರ್ಯಾಚರಣೆಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಯೋಜನೆಯು 3,435.33 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಕ್ಕೆ ಬರುತ್ತಿದೆ ಎಂದು ಕುಮಾರಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನಿಯೋಜನೆಯ ದಿನಾಂಕದಿಂದ 12 ವರ್ಷಗಳವರೆಗೆ ಇ-ಬಸ್ಗಳ ಕಾರ್ಯಾಚರಣೆಯನ್ನು ಯೋಜನೆಯು ಬೆಂಬಲಿಸುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ, ಸಾರ್ವಜನಿಕ ಸಾರಿಗೆ ಪ್ರಾಧಿಕಾರಿಗಳಿಂದ ನಿರ್ವಹಿಸಲ್ಪಡುವ ಬಹುತೇಕ ಬಸ್ಗಳು ಡೀಸೆಲ್ ಅಥವಾ ಸಿಎನ್ಜಿಯಲ್ಲಿ ಚಲಿಸುತ್ತವೆ, ಇದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದರೆ ಇ-ಬಸ್ಗಳು ಪರಿಸರ ಸ್ನೇಹಿ ಮತ್ತು ಕಡಿಮೆ ಕಾರ್ಯಾಚರಣೆಯ ವೆಚ್ಚವನ್ನು ಹೊಂದಿವೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.