ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಉಗ್ರರ ಚಟುವಟಿಕೆಗಳು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕೂಡ ತಮ್ಮ ಕಣ್ಗಾವಲನ್ನು ತೀಕ್ಷ್ಣಗೊಳಿಸಿದ್ದು, ಅನುಮಾನಸ್ಪದ ವ್ಯಕ್ತಿಗಳು ಮತ್ತು ಸ್ಥಳಗಳ ವಿರುದ್ಧ ತೀವ್ರ ಸ್ವರೂಪದ ಕಾರ್ಯಾಚರಣೆಯನ್ನು ಕೈಗೊಳ್ಳುತ್ತಿವೆ. ಮೊನ್ನೆ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ, ನಿನ್ನೆ ಒರ್ವ ಉಗ್ರ ಸಹಚರನನ್ನು ಬಂಧಿಸಲಾಗಿದೆ.
ಭದ್ರತಾ ಪಡೆಗಳು ನಿನ್ನೆ ಸಂಜೆ ಪೂಂಚ್ ಜಿಲ್ಲೆಯಲ್ಲಿ ಸ್ಫೋಟಕಗಳು ಮತ್ತು ಮದ್ದುಗುಂಡುಗಳೊಂದಿಗೆ ಜಮ್ಮು ಮತ್ತು ಕಾಶ್ಮೀರ ಘಜ್ನವಿ ಫೋರ್ಸ್ (ಜೆಕೆಜಿಎಫ್) ಸಂಘಟನೆಯ ಒಬ್ಬ ಭಯೋತ್ಪಾದಕ ಸಹಚರನನ್ನು ಬಂಧಿಸಿವೆ ಎಂದು ಮೂಲಗಳು ತಿಳಿಸಿವೆ.
ಸುರನ್ಕೋಟೆಯ ಪೋಥಾ ಬೈಪಾಸ್ನಲ್ಲಿ ಭದ್ರತಾ ಪಡೆಗಳ ಜಂಟಿ ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ, ಶಂಕಿತನನ್ನು ಮೂರು ಹ್ಯಾಂಡ್ ಗ್ರೆನೇಡ್ಗಳು, ಸ್ಫೋಟಕ ವಸ್ತುಗಳು ಮತ್ತು ಇತರ ಅಕ್ರಮ ವಸ್ತುಗಳನ್ನು ಒಳಗೊಂಡ ಬ್ಯಾಗ್ನೊಂದಿಗೆ ಬಂಧಿಸಲಾಯಿತು. ಪ್ರಾಥಮಿಕ ತನಿಖೆಯಿಂದ ಆತನ ಗುರುತು ದರಿಯಾಲಾ ನೌಶೇರಾ ನಿವಾಸಿ ಮೊಹಮ್ಮದ್ ಶಬೀರ್ ಎಂದು ದೃಢಪಟ್ಟಿದೆ. ಅವನು ಪಿಒಕೆ ಹ್ಯಾಂಡ್ಲರ್ ಜೊತೆ ಸಂಪರ್ಕದಲ್ಲಿದ್ದಾನೆ. ತನಿಖೆ ನಡೆಯುತ್ತಿದ್ದು, ಇನ್ನಷ್ಟು ಸಹಚರರ ಬಂಧನಮವಾಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.