ನವದೆಹಲಿ: ಮಹತ್ವದ ಕ್ರಮದಲ್ಲಿ, ಕೇಂದ್ರ ಸರ್ಕಾರವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಈ ನಿರ್ಧಾರವು ಪ್ರಾಚೀನ ಶ್ರೀ ವಿಜಯ ಸಾಮ್ರಾಜ್ಯದಿಂದ ಸ್ಫೂರ್ತಿ ಪಡೆದು ಪ್ರದೇಶದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಗೌರವಿಸುವ ಸರ್ಕಾರದ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ.
ಈ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಟ್ವಿಟ್ ಮಾಡಿದ್ದು, ” ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಪ್ರೇರಿತವಾಗಿದೆ ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು, ಇಂದು ನಾವು ಪೋರ್ಟ್ ಬ್ಲೇರ್ ಅನ್ನು “ಶ್ರೀ ವಿಜಯ ಪುರಂ” ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ” ಎಂದಿದ್ದಾರೆ.
“ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿತ್ತು, ಶ್ರೀ ವಿಜಯ ಪುರಂ ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಮತ್ತು ಅಂಡಮಾನ್ ಮತ್ತು ನಿಕೋಬರ್ ದ್ವೀಪಗಳ ವಿಶಿಷ್ಟ ಪಾತ್ರವನ್ನು ಸಂಕೇತಿಸುತ್ತದೆ” ಎಂದಿದ್ದಾಎಎ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಅಪ್ರತಿಮ ಸ್ಥಾನವನ್ನು ಹೊಂದಿವೆ. ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾನೆಲೆಯಾಗಿ ಸೇವೆ ಸಲ್ಲಿಸಿದ ದ್ವೀಪ ಪ್ರದೇಶವು ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ನಮ್ಮ ತಿರಂಗದ ಮೊದಲ ಅನಾವರಣವನ್ನು ಆಯೋಜಿಸಿದ ಸ್ಥಳ ಮತ್ತು ವೀರ್ ಸಾವರ್ಕರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಡಿ ಸೇರಿದ ಸೆಲ್ಯುಲಾರ್ ಜೈಲು ಕೂಡ ಅಲ್ಲಿದೆ ಎಂದಿದ್ದಾರೆ.
Inspired by the vision of PM @narendramodi Ji, to free the nation from the colonial imprints, today we have decided to rename Port Blair as "Sri Vijaya Puram."
While the earlier name had a colonial legacy, Sri Vijaya Puram symbolises the victory achieved in our freedom struggle…
— Amit Shah (@AmitShah) September 13, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.