ನವದೆಹಲಿ: ಜಮ್ಮು ಮತ್ತು ಕಾಶ್ಮೀರದದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಪ್ರಚಾರ ಕಾರ್ಯಕ್ಕೆ ಆರಂಭವನ್ನು ನೀಡಲಿದ್ದಾರೆ. ದೋಡಾದಲ್ಲಿ ಅವರು ಬೃಹತ್ ಸಾರ್ವಜನಿಕ ಸಮಾವೇಶವನ್ನು ನಡೆಸಲಿದ್ದಾರೆ.
ಕಳೆದ 42 ವರ್ಷಗಳಲ್ಲಿ ದೋಡಾಕ್ಕೆ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದು ಮೊದಲನೆಯದು.
“ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಚುನಾವಣಾ ಸಭೆಯನ್ನು ಶನಿವಾರ ದೋಡಾದಲ್ಲಿ ನಡೆಸಲಿದ್ದಾರೆ. 42 ವರ್ಷಗಳಲ್ಲಿ ಯಾವುದೇ ಪ್ರಧಾನಿ ದೋಡಾಗೆ ಭೇಟಿ ನೀಡಿದ ಮೊದಲ ಮೊದಲ ಭೇಟಿ ಇದಾಗಿರುವುದರಿಂದ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. 1982 ರಲ್ಲಿ ದೋಡಾಗೆ ಕೊನೆಯ ಬಾರಿಗೆ ಅಂದಿನ ಪ್ರಧಾನಿ ಭೇಟಿ ನೀಡಿದ್ದರು”ಎಂದು ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.
ಬಿಜೆಪಿಯ ಪ್ರಮುಖ ಪ್ರಚಾರಕರಾಗಿ ಪ್ರಧಾನಿ ಮೋದಿ ಅವರು ದೋಡಾ ಸ್ಪೋರ್ಟ್ಸ್ ಸ್ಟೇಡಿಯಂನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಗಸ್ಟ್ 31 ರಂದು ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಅಧಿಕೃತ ಘೋಷಣೆಯ ನಂತರ ಪ್ರಧಾನಿ ಮೋದಿಯವರ ಮೊದಲ ಚುನಾವಣಾ ಸಮಾವೇಶ ಇದಾಗಿದೆ.
ಮೋದಿ ತಮ್ಮ ಪ್ರಚಾರದ ಭಾಗವಾಗಿ ಸೆಪ್ಟೆಂಬರ್ 19 ರಂದು ಶ್ರೀನಗರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ.
ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ ದಕ್ಷಿಣ ಕಾಶ್ಮೀರದ 16 ಕ್ಷೇತ್ರಗಳ ಜೊತೆಗೆ ದೋಡಾ, ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳಾದ್ಯಂತ ಎಂಟು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ದೋಡಾದಲ್ಲಿ, ಬಿಜೆಪಿ ಗಜಯ್ ಸಿಂಗ್ ರಾಣಾ ಅವರನ್ನು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ, ಶಕ್ತಿ ರಾಜ್ ಪರಿಹಾರ್ ದೋಡಾ ಪಶ್ಚಿಮ ಕ್ಷೇತ್ರದಿಂದ ಪಕ್ಷದ ಟಿಕೆಟ್ನಲ್ಲಿ ಸ್ಪರ್ಧಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.