ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು-ಕಾಶ್ಮೀರದ ದೋಡಾದ ಕ್ರೀಡಾಂಗಣದಲ್ಲಿ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸುರಕ್ಷಿತ ಮತ್ತು ಸಮೃದ್ಧ ಜಮ್ಮು ಮತ್ತು ಕಾಶ್ಮೀರವನ್ನು ಒಟ್ಟಾಗಿ ನಿರ್ಮಿಸಲಾಗುವುದು. ಈ ಬಾರಿಯ ವಿಧಾನಸಭಾ ಚುನಾವಣೆಯು ಕೇಂದ್ರಾಡಳಿತ ಪ್ರದೇಶದ ಭವಿಷ್ಯವನ್ನು ನಿರ್ಧರಿಸಲಿದೆ ಎಂದರು.
ರಾಜಕೀಯ ಪಕ್ಷಗಳು ಕಾಶ್ಮೀರಿ ಮಕ್ಕಳನ್ನು ನಿರ್ಲಕ್ಷಿಸಿ ತಮ್ಮ ಸ್ವಂತ ಕುಟುಂಬದ ಹಿತಾಸಕ್ತಿಗಳನ್ನು ಮಾತ್ರ ಮುಂದಿಟ್ಟಿವೆ ಎಂದು ವಾಗ್ದಾಳಿ ನಡೆಸಿದರು.
ಜಮ್ಮು ಮತ್ತು ಕಾಶ್ಮೀರದ ಯುವಕರು ಭಯೋತ್ಪಾದನೆಯಿಂದ ಬಳಲುತ್ತಿದ್ದಾರೆ ಮತ್ತು ‘ಪರಿವಾರವಾದ’ವನ್ನು ಉತ್ತೇಜಿಸುವ ಪಕ್ಷಗಳು ಜನರನ್ನು ದಾರಿ ತಪ್ಪಿಸುವ ಮೂಲಕ ಮೋಜು ಮಾಡುತ್ತಿವೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಂದು ಮಗುವೂ ಉತ್ತಮ ಶಿಕ್ಷಣವನ್ನು ಪಡೆಯಬೇಕು ಎಂದು ಮೋದಿ ಹೇಳಿದರು.
ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಸರ್ಕಾರವು ಯುವಜನರ ಅಭ್ಯುದಯಕ್ಕಾಗಿ ಕೇಂದ್ರಾಡಳಿತ ಪ್ರದೇಶದಲ್ಲಿ ವಿವಿಧ ಶಾಲಾ-ಕಾಲೇಜುಗಳನ್ನು ಉದ್ಘಾಟಿಸಿದೆ ಎಂದು ಮೋದಿ ಹೇಳಿದರು.
ದೋಡಾದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣದ ಬಹುಕಾಲದ ಬೇಡಿಕೆಯೂ ಬಿಜೆಪಿ ಸರ್ಕಾರದಿಂದ ಇತ್ತೀಚೆಗೆ ಈಡೇರಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.