ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ಗಾಂಧಿನಗರ ಜಿಲ್ಲೆಯಲ್ಲಿ 4 ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ (ರೀ-ಇನ್ವೆಸ್ಟ್) 2024 ಅನ್ನು ಸೋಮವಾರ ಉದ್ಘಾಟಿಸಿದರು.
ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿರುವ ಮೂರು ದಿನಗಳ ಸಮ್ಮೇಳನವು ಸರ್ಕಾರ, ಕೈಗಾರಿಕೆ ಮತ್ತು ಹಣಕಾಸು ಕ್ಷೇತ್ರಗಳ ಪ್ರಭಾವಿ ವ್ಯಕ್ತಿಗಳು ಸೇರಿದಂತೆ 10,000 ಕ್ಕೂ ಹೆಚ್ಚು ಪ್ರತಿನಿಧಿಗಳನ್ನು ಸೆಳೆಯುವ ನಿರೀಕ್ಷೆಯಿದೆ.
ಕೇಂದ್ರದ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ, ಮಧ್ಯಪ್ರದೇಶ ಸಿಎಂ ಮೋಹನ್ ಕುಮಾರ್ ಯಾದವ್, ಛತ್ತೀಸ್ಗಢ ಸಿಎಂ ವಿಷ್ಣು ದೇವ್ ಸಾಯಿ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನವೀಕರಿಸಬಹುದಾದ ಇಂಧನದಲ್ಲಿ ಭಾರತವು ಜಾಗತಿಕ ನಾಯಕನಾಗಲು ಅನುಕೂಲ ಮಾಡಿಕೊಟ್ಟ ಪ್ರಧಾನಿಯವರ ನಾಯಕತ್ವವನ್ನು ಶ್ಲಾಘಿಸಿದರು.
#WATCH | Gujarat: Prime Minister Narendra Modi inaugurates 4th Global Renewable Energy Investor’s Meet and Expo (RE-INVEST) at Mahatma Mandir, Gandhinagar
CM Bhupendra Patel is also present. pic.twitter.com/1g1CdUIJCB
— ANI (@ANI) September 16, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.