ನವದೆಹಲಿ: ತಮ್ಮ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ದೇಶದ ಕ್ಷಿಪ್ರ ಪ್ರಗತಿಗಾಗಿ ಪ್ರತಿಯೊಂದು ಕ್ಷೇತ್ರ ಮತ್ತು ವಲಯದ ಸಮಸ್ಯೆಯನ್ನು ಪರಿಹರಿಸಲು ತಮ್ಮ ಸರ್ಕಾರ ಪ್ರಯತ್ನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡು ಪೂರ್ಣ ಅವಧಿಯ ನಂತರ ಮೂರನೇ ಅವಧಿಗೆ ಸಮ್ಮಿಶ್ರ ಸರ್ಕಾರದ ಮುಖ್ಯಸ್ಥರಾಗಿ ಮೂರನೇ ನೇರ ಅವಧಿಗೆ ಜೂನ್ 9 ರಂದು ಮೋದಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ 73 ವರ್ಷದ ಮೋದಿ ಅವರು 1952, 1957 ಮತ್ತು 1962 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಗೆದ್ದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಸಾಧನೆಯನ್ನು ಸರಿಗಟ್ಟಿದ್ದಾರೆ.
“ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ, ನಮ್ಮ ಆದ್ಯತೆಗಳು, ವೇಗ ಮತ್ತು ಪ್ರಮಾಣವನ್ನು ನೀವು ನೋಡಿದ್ದೀರಿ. ದೇಶದ ತ್ವರಿತ ಪ್ರಗತಿಗೆ ಅಗತ್ಯವಿರುವ ಪ್ರತಿಯೊಂದು ಕ್ಷೇತ್ರ ಮತ್ತು ಅಂಶದ ಸಮಸ್ಯೆ ಪರಿಹರಿಸಲು ನಾವು ಪ್ರಯತ್ನಿಸಿದ್ದೇವೆ” ಎಂದು ಮೋದಿ ಅವರು 4 ನೇ ಆವೃತ್ತಿಯ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಭೆ ಮತ್ತು ಎಕ್ಸ್ಪೋ (ರೀ-ಇನ್ವೆಸ್ಟ್ 2024) ಉದ್ಘಾಟಿಸಿದ ಬಳಿಕ ಹೇಳಿದರು.
21ನೇ ಶತಮಾನಕ್ಕೆ ಭಾರತವೇ ಅತ್ಯುತ್ತಮ ನಾಯಕ ಎಂದು ಭಾರತೀಯರಷ್ಟೇ ಅಲ್ಲ ಇಡೀ ವಿಶ್ವವೇ ಭಾವಿಸುತ್ತದೆ ಎಂದು ಪ್ರಧಾನಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.