ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಹೆಸರನ್ನು ಪ್ರಸ್ತಾಪಿಸಿದ್ದಾರೆ.
ದೆಹಲಿ ಮದ್ಯ ಹಗರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದ ನಂತರ 48 ಗಂಟೆಗಳ ಒಳಗೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಇಂದು ಲೆಫ್ಟಿನೆಂಡ್ ಗವರ್ನರ್ ಅವರನ್ನು ಭೇಟಿಯಾದ ನಂತರ ಕೇಜ್ರಿವಾಲ್ ರಾಜೀನಾಮೆ ನೀಡಿದ್ದಾರೆ. ನಾನು ಮರುಚುನಾವಣೆ ಬಯಸುತ್ತೇನೆ ಮತ್ತು ದೆಹಲಿಯ ಜನರಿಂದ “ಪ್ರಾಮಾಣಿಕತೆಯ ಪ್ರಮಾಣಪತ್ರ” ಪಡೆಯುವ ಮೊದಲು ಕುರ್ಚಿಯ ಮೇಲೆ ಕುಳಿತುಕೊಳ್ಳುವುದಿಲ್ಲ ಎಂದು ಜೈಲಿನಿಂದ ಬಿಡುಗಡೆಯಾದ ಬಳಿಕ ಹೇಳಿದ್ದರು.
ದೆಹಲಿ ವಿಧಾನಸಭಾ ಚುನಾವಣೆಯನ್ನು ನವೆಂಬರ್ನಲ್ಲಿ ನಡೆಸುವಂತೆ ಅರವಿಂದ್ ಕೇಜ್ರಿವಾಲ್ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
“ಇಂದು ದೆಹಲಿ ಎಎಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಸಭೆಯಲ್ಲಿ ಅತಿಶಿ ಅವರಿಗೆ ಮುಂದಿನ ದೆಹಲಿ ಚುನಾವಣೆವರೆಗೆ ಸಿಎಂ ಜವಾಬ್ದಾರಿಯನ್ನು ಸರ್ವಾನುಮತದಿಂದ ನೀಡಲಾಯಿತು. ಪ್ರತಿಕೂಲ ಪರಿಸ್ಥಿತಿಯಲ್ಲಿ ನಾವು ಈ ಜವಾಬ್ದಾರಿಯನ್ನು ನೀಡಬೇಕಾಯಿತು. ದೆಹಲಿಯ ಜನರ ಹಿತಾಸಕ್ತಿಯಿಂದ, ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದರೂ ರಾಜೀನಾಮೆ ನೀಡಲಿಲ್ಲ ಮತ್ತು ಅಲ್ಲಿಂದ ಸರ್ಕಾರವನ್ನು ನಡೆಸಲು ನಿರ್ಧರಿಸಿದರು. ಈಗ ಅವರು ಜನತಾ ನ್ಯಾಯಾಲಯಕ್ಕೆ ಹೋಗಲು ನಿರ್ಧರಿಸಿದ್ದಾರೆ ಮತ್ತು ಜನರು ಮತ್ತೊಮ್ಮೆ ಅವರನ್ನು ಸಿಎಂ ಆಗಿ ಆಯ್ಕೆ ಮಾಡುವವರೆಗೆ ಅವರು ಸಿಎಂ ಆಗಿ ಮುಂದುವರಿಯುವುದಿಲ್ಲ” ಎಂದು ಎಎಪಿ ನಾಯಕ ಗೋಪಾಲ್ ರೈ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.