
ನವದೆಹಲಿ: ದೆಹಲಿ ಸಿಎಂ ಆಗಿ ನೇಮಕಗೊಂಡಿರುವ ಸಚಿವೆ ಆತಿಶಿ ವಿರುದ್ಧ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಉಗ್ರರಿಗಾಗಿ ಹೋರಾಡಿದ ಕುಟುಂಬದ ಮಹಿಳೆ ಇಂದು ಸಿಎಂ ಆಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಸ್ವಾತಿ, ಆತಿಶಿ ಕುಟುಂಬವು ಈ ಹಿಂದೆ ಭಯೋತ್ಪಾದಕ ಅಫ್ಜಲ್ ಗುರು ಪರ ವಕಾಲತ್ತು ವಹಿಸಿದೆ ಎಂದು ಆರೋಪಿಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
“ಇಂದು ದೆಹಲಿಗೆ ಅತ್ಯಂತ ದುಃಖದ ದಿನ” ಎಂದು ಬರೆದಿರುವ ಮಲಿವಾಲ್, 2001 ರ ಸಂಸತ್ ದಾಳಿ ಪ್ರಕರಣದಲ್ಲಿ ಅಪರಾಧಿಯಾಗಿರುವ ಅಫ್ಜಲ್ ಗುರುವನ್ನು ರಕ್ಷಿಸಲು ಅತಿಶಿಯ ಪೋಷಕರು ಹೋರಾಡಿದ್ದಾರೆ ಎಂದು ಹೇಳಿದ್ದಾರೆ. “ಅತಿಶಿ ಮರ್ಲೆನಾ ಕೇವಲ ‘ಡಮ್ಮಿ ಸಿಎಂ’ ಆಗಿದ್ದರೂ, ಈ ವಿಷಯವು ದೇಶದ ಭದ್ರತೆಗೆ ಸಂಬಂಧಿಸಿದೆ. ದೇವರು ದೆಹಲಿಯನ್ನು ರಕ್ಷಿಸಲಿ” ಎಂದಿದ್ದಾರೆ. ಅಲ್ಲದೇ ಆತಿಶಿ ಸಹಿ ಹಾಕಿರುವ ಅಫ್ಜಲ್ ಗುರುವಿಗೆ ಕ್ಷಮಾದಾನ ನೀಡುವಂತೆ ಕೋರುವ ಪತ್ರವನ್ನೂ ಕೂಡ ಹಂಚಿಕೊಂಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರ ರಾಜೀನಾಮೆಯ ನಂತರ ಅತಿಶಿ ಅವರನ್ನು ಸಿಎಂ ಆಗಿ ನೇಮಕ ಮಾಡಲಾಗಿದೆ, ಎಎಪಿ ಅವರನ್ನು ಅವರ ಉತ್ತರಾಧಿಕಾರಿಯಾಗಿ ಸರ್ವಾನುಮತದಿಂದ ಬೆಂಬಲಿಸಿದೆ.
ಪಕ್ಷದ ಹಿರಿಯ ನಾಯಕಿ ಎನಿಸಿರುವ ಅತಿಶಿ ಅವರು ದೆಹಲಿ ಸರ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ, ಹಣಕಾಸು ಮತ್ತು ಶಿಕ್ಷಣದಂತಹ ಪ್ರಮುಖ ಖಾತೆಗಳನ್ನು ನಿಭಾಯಿಸುತ್ತಿದ್ದಾರೆ.
दिल्ली के लिए आज बहुत दुखद दिन है। आज दिल्ली की मुख्यमंत्री एक ऐसी महिला को बनाया जा रहा है जिनके परिवार ने आतंकवादी अफ़ज़ल गुरु को फांसी से बचाने की लंबी लड़ाई लड़ी।
उनके माता पिता ने आतंकी अफ़ज़ल गुरु को बचाने के लिए माननीय राष्ट्रपति को दया याचिकाऐं लिखी।
उनके हिसाब से… pic.twitter.com/SbllONqVP0
— Swati Maliwal (@SwatiJaiHind) September 17, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


