ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗಣೇಶ ಪೂಜೆಯಲ್ಲಿ ಭಾಗಿಯಾದ ಕಾರಣಕ್ಕೆ ಇವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಭುವನೇಶ್ವರದಲ್ಲಿ ನಡೆದ ಮಸಮಾವೇಶದಲ್ಲಿ ಮಾತನಾಡಿದ ಮೋದಿ, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗಿಯಾಗಿದ್ದಕ್ಕೆ ವಿರೋಧ ಪಕ್ಷಗಳು ಮಾಡಿದ ಟೀಕೆಗಳನ್ನು ಉಲ್ಲೇಖಿಸಿಸಿದ್ದಾರೆ. “ಗಣೇಶ ಉತ್ಸವ ನಮಗೆ ನಂಬಿಕೆಯ ಹಬ್ಬವಲ್ಲ. ಅದು ನಮ್ಮ ಸ್ವಾತಂತ್ರ್ಯ ಚಳುವಳಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ” ಎಂದು ಮೋದಿ ಗಮನಸೆಳೆದರು.
“ಒಡೆದು ಆಳುವ ಕಾಲದ ಬ್ರಿಟಿಷರು ಗಣೇಶ ಉತ್ಸವವನ್ನು ಧಿಕ್ಕರಿಸುತ್ತಿದ್ದರು, ಇಂದು ಅಧಿಕಾರದ ಆಸೆಯಿಂದ ಸಮಾಜವನ್ನು ಒಡೆಯುವ ಹುನ್ನಾರ ನಡೆಸುತ್ತಿರುವವರಿಗೆ ಗಣೇಶ ಪೂಜೆ ಸಮಸ್ಯೆಯಾಗುತ್ತಿದೆ ಎಂಬುದನ್ನು ನಾವು ಗಮನಿಸಬೇಕು. ನಾನು ಗಣೇಶ ಪೂಜೆಯಲ್ಲಿ ಭಾಗವಹಿಸಿದ್ದರಿಂದ ಕಾಂಗರೆಸ್ ಪರಿಸರ ವ್ಯವಸ್ಥೆ ಹಾಿಗೀಡಾಗಿದೆ’’ ಎಂದರು.
ಅಲ್ಲದೇ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಗಣೇಶನನ್ನು ಕಂಬಿ ಹಿಂದೆ ಹಾಕಿದ್ದಾರೆ ಎಂದು ಮೋದಿ ಹೇಳಿದ್ದಾರೆ.
#WATCH | Bhubaneswar, Odisha: PM Modi says, "The British, who worked on the policy of 'Divide and Rule', were irked by the Ganesh Utsav. Today also, the people who are trying to divide and break the Indian society are irked by Ganesh Utsav. People who are hungry for power have an… pic.twitter.com/9JmvgCbjLn
— ANI (@ANI) September 17, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.