ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದ್ದು, ಕೇಂದ್ರಾಡಳಿತ ಪ್ರದೇಶದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಇದು 2014 ರ ಬಳಿಕ ಇಲ್ಲಿ ನಡೆಯುತ್ತಿರುವ ಮೊದಲ ಅಸೆಂಬ್ಲಿ ಚುನಾವಣೆ ಇದಾಗಿದೆ. ಅಲ್ಲದೇ 2019 ರಲ್ಲಿ 370 ನೇ ವಿಧಿಯನ್ನು ತೆಗೆದುಹಾಕಿ, ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಾಜ್ಯವನ್ನು ಮರುಸಂಘಟಿಸಿದ ನಂತರ ನಡೆಯುತ್ತಿರುವ ಮೊದಲ ಚುನಾವಣೆಯಾಗಿರುವುದರಿಂದಲೂ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ.
ಹಲವಾರು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಪುಲ್ವಾಮಾದಲ್ಲಿ ನಾಲ್ಕು, ಶೋಪಿಯಾನ್ನಲ್ಲಿ ಎರಡು, ಕುಲ್ಗಾಮ್ನಲ್ಲಿ ಮೂರು, ಅನಂತ್ನಾಗ್ನಲ್ಲಿ ಏಳು, ಕಿಶ್ತ್ವಾರ್ನಲ್ಲಿ ಮೂರು, ದೋಡಾದಲ್ಲಿ ಮೂರು ಮತ್ತು ರಾಂಬನ್ ಮತ್ತು ಬನಿಹಾಲ್ನಲ್ಲಿ ತಲಾ ಎರಡು ಸ್ಥಾನಗಳಲ್ಲಿ ಇಂದು ಮತದಾನ ನಡೆಯುತ್ತಿದೆ.
ಒಟ್ಟು ಎಂಟು ಕ್ಷೇತ್ರಗಳು ಜಮ್ಮುವಿನಲ್ಲಿದ್ದರೆ, 16 ಕಾಶ್ಮೀರ ಕಣಿವೆಯಲ್ಲಿವೆ.
ಬಿಜೆಪಿ, ಕಾಂಗ್ರೆಸ್, ಮೆಹಬೂಬಾ ಮುಫ್ತಿ ಅವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಅಬ್ದುಲ್ ಘನಿ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್, ಗುಲಾಂ ನಬಿ ಆಜಾದ್ ಅವರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮತ್ತು ಅಲ್ತಾಫ್ ಬುಖಾರಿ ಅವರ ಅಪ್ನಿ ಪಾರ್ಟಿ ಕೂಡ ಕಣದಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.