ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿ ಐತಿಹಾಸಿಕ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ಜಿಜಿಯು ಅವರು ಬಣ್ಣಿಸಿದ್ದಾರೆ.
ಮೊದಲ 100 ದಿನಗಳಲ್ಲಿ ಸರ್ಕಾರವು ಜನರ ಕಲ್ಯಾಣಕ್ಕಾಗಿ 15 ಲಕ್ಷ ಕೋಟಿ ರೂಪಾಯಿಗಳ ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಾರಿ ಶಕ್ತಿಗೆ ಮೂರು ಲಕ್ಷ ಕೋಟಿ ರೂಪಾಯಿಗಳನ್ನು ಮತ್ತು ಯುವಕರಿಗೆ ಕೌಶಲ್ಯ ಮತ್ತು ತರಬೇತಿ ನೀಡಲು ಎರಡು ಲಕ್ಷ ಕೋಟಿ ರೂಪಾಯಿಗಳನ್ನು ಸರ್ಕಾರ ವ್ಯಯಿಸಲಿದೆ. ಸರ್ಕಾರದ 100 ದಿನಗಳ ಅವಧಿಯಲ್ಲಿ ಸಾಧಿಸಿದ ಯಶಸ್ಸು ಅಪಾರವಾಗಿದೆ ಎಂದರು.
ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ಜಂಟಿ ಸಂಸದೀಯ ಸಮಿತಿಗೆ ಹೆಚ್ಚಿನ ಪರಿಶೀಲನೆಗಾಗಿ ಉಲ್ಲೇಖಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಹೇಳಿದ್ದಾರೆ. ಮಸೂದೆಯು ಮುಸ್ಲಿಂ ಸಮುದಾಯದ ಕಲ್ಯಾಣಕ್ಕಾಗಿ ಮಾತ್ರ. ಈ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ವಾರದ ಕೊನೆಯ ದಿನದೊಳಗೆ ಸಮಿತಿಯು ಮಸೂದೆಯನ್ನು ಸದನಕ್ಕೆ ವರದಿ ಮಾಡಲು ನಿರ್ಧರಿಸಿದೆ ಎಂದು ರಿಜಿಜು ಹೇಳಿದ್ದಾರೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರೂ ಆಗಿರುವ ರಿಜಿಯು , ಸರ್ಕಾರವು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್ ಮಂತ್ರದೊಂದಿಗೆ ಮುನ್ನಡೆಯುತ್ತಿದೆ ಮತ್ತು ಅವರ ಸಚಿವಾಲಯವು ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳನ್ನು ನೋಡಿಕೊಳ್ಳುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.