ನವದೆಹಲಿ: ಹೊಸದಾಗಿ ಅನುಷ್ಠಾನಕ್ಕೆ ತರಲಾದ ಅಪರಾಧ ಕಾನೂನುಗಳ ಅಡಿಯಲ್ಲಿ ಇದುವರೆಗೆ ಒಟ್ಟು 5 ಲಕ್ಷದ 56 ಸಾವಿರ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ, 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್, 2023 ಅನ್ನು ಈ ವರ್ಷ ಜುಲೈ 1 ರಂದು ಜಾರಿಗೆ ತರಲಾಗಿದೆ.
ಈ ವರ್ಷದ ಜುಲೈ 1 ರಿಂದ ಸೆಪ್ಟೆಂಬರ್ 3 ರ ನಡುವೆ ಈ ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಗೃಹ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಮತ್ತು ನ್ಯಾಷನಲ್ ಫೋರೆನ್ಸಿಕ್ ಸೈನ್ಸಸ್ ಯುನಿವರ್ಸಿಟಿ ನಡೆಸಿದ ನಿಯಮಿತ ತರಬೇತಿ ಮತ್ತು ವೆಬ್ನಾರ್ಗಳ ಮೂಲಕ ಎಂಟು ಲಕ್ಷಕ್ಕೂ ಹೆಚ್ಚು ಅಧಿಕಾರಿಗಳಿಗೆ ಮೂರು ಕ್ರಿಮಿನಲ್ ಕಾನೂನುಗಳ ಕುರಿತು ತರಬೇತಿ ನೀಡಲಾಗಿದೆ ಎಂದು ಅವರು ಹೇಳಿದರು.
ಹೊಸ ಕ್ರಿಮಿನಲ್ ಕಾನೂನುಗಳನ್ನು ನ್ಯಾವಿಗೇಟ್ ಮಾಡಲು ಬಳಕೆದಾರರಿಗೆ ಸಹಾಯ ಮಾಡಲು ಮೊಬೈಲ್ ಮತ್ತು ವೆಬ್ ಅಪ್ಲಿಕೇಶನ್ ‘NCRB ಸಂಕಲನ್ ಆಫ್ ಕ್ರಿಮಿನಲ್ ಲಾಸ್’ ಅನ್ನು ವಿನ್ಯಾಸಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.