ಹೈದರಾಬಾದ್: ಜಗನ್ ಮೋಹನ್ ರೆಡ್ಡಿ ಅವರ ಆಡಳಿತಾವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಇತ್ತು ಎಂದು ಹೇಳುವ ಮೂಲಕ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ.
ಈ ಹೇಳಿಕೆ ಆಡಳಿತಾರೂಢ ತೆಲುಗು ದೇಶಂ ಪಕ್ಷ ಮತ್ತು ಪ್ರತಿಸ್ಪರ್ಧಿ ವೈಎಸ್ಆರ್ ಕಾಂಗ್ರೆಸ್ ನಡುವೆ ದೊಡ್ಡ ಮಟ್ಟದ ವಾಗ್ಯುದ್ಧವನ್ನೇ ಆರಂಭಿಸಿದೆ.
ಇನ್ನೊಂದೆಡೆ ಲ್ಯಾಬ್ ವರದಿ ಕೂಡ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಇರುವುದನ್ನು ದೃಢಪಡಿಸಿದೆ.
ವೈಎಸ್ಆರ್ಸಿಪಿ ಅಧಿಕಾರದಲ್ಲಿದ್ದಾಗ ಪ್ರಸಿದ್ಧ ತಿರುಪತಿ ಲಡ್ಡುಗಳನ್ನು ತಯಾರಿಸಲು ಬಳಸುತ್ತಿದ್ದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಇರುವುದನ್ನು ಗುಜರಾತ್ನ ಕೇಂದ್ರ-ಚಾಲಿತ ರಾಷ್ಟ್ರೀಯ ಡೈರಿ ಡೆವಲಪ್ಮೆಂಟ್ ಬೋರ್ಡ್ನಲ್ಲಿರುವ ಸೆಂಟರ್ ಆಫ್ ಅನಾಲಿಸಿಸ್ ಅಂಡ್ ಲರ್ನಿಂಗ್ ಇನ್ ಲಿವ್ಸ್ಟಾಕ್ ಆಂಡ್ ಫುಡ್ ಅಥವಾ CALF ಪ್ರಯೋಗಾಲಯದ ವರದಿ ದೃಢಪಡಿಸಿದೆ.
ವರದಿಯು ತುಪ್ಪದಲ್ಲಿ ಮೀನಿನ ಎಣ್ಣೆ, ಬೀಫ್ ಟ್ಯಾಲೋ ಮತ್ತು ಹಂದಿ ಕೊಬ್ಬಿನ ಕುರುಹುಗಳಿವೆ ಎಂದು ಸೂಚಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ ಪೋಸ್ಟ್ ಮಾಡಿರುವ ಆಂಧ್ರ ಐಟಿ ಸಚಿವ ನಾರಾ ಲೋಕೇಶ್ ಅವರು, “ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯವು ನಮ್ಮ ಅತ್ಯಂತ ಪವಿತ್ರವಾದ ದೇವಾಲಯವಾಗಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಆಡಳಿತವು ತಿರುಪತಿ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದೆ ಎಂದು ತಿಳಿದು ನನಗೆ ಆಘಾತವಾಗಿದೆ. ಆ ಪಕ್ಷ ಕೋಟ್ಯಂತರ ಜನರ ಭಾವನೆಗಳನ್ನು ಗೌರವಿಸಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.