ಹೈದರಾಬಾದ್: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವಾಲಯವು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ “ವಿವರವಾದ ವರದಿ” ನೀಡುವಂತೆ ಕೇಳಿದೆ. ಜಿಐ ಟ್ಯಾಗ್ ಹೊಂದಿರುವ ತಿರುಪತಿ ಲಡ್ಡುಗಳನ್ನು ದೇವಾಲಯದಲ್ಲಿ ದೇವರಿಗೆ ಅರ್ಪಿಸಲಾಗುತ್ತದೆ ಮತ್ತು ಪ್ರತಿ ವರ್ಷ ಭೇಟಿ ನೀಡುವ ಕೋಟಿಗಟ್ಟಲೆ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆ.
ವಿವಾದಕ್ಕೆ ಸಂಬಂಧಿಸಿದಂತೆ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು ಕೂಲಂಕುಷ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. “ಮುಖ್ಯಮಂತ್ರಿ ಏನೇ ಹೇಳಿದರೂ ಅದು ಗಂಭೀರ ಕಳವಳಕಾರಿ ವಿಷಯವಾಗಿದೆ. ವಿಸ್ತೃತ ತನಿಖೆಯ ಅಗತ್ಯವಿದೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದಿದ್ದಾರೆ.
ಗುಜರಾತ್ ಲ್ಯಾಬ್ ನೀಡಿದ ವರದಿಯನ್ನು ಉಲ್ಲೇಖಿಸಿ ಚಂದ್ರಬಾಬು ನಾಯ್ಡು ಅವರು ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಇರುವ ಹೇಳಿಕೆ ನೀಡಿದ್ದಾರೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರದಲ್ಲಿದ್ದಾಗ ಬಳಸಿದ ತುಪ್ಪದ ಮಾದರಿಗಳಲ್ಲಿ ಗೋಮಾಂಸ ಟ್ಯಾಲೋ, ಮೀನಿನ ಎಣ್ಣೆಯ ಕುರುಹುಗಳಿವೆ ಎಂದು ಲ್ಯಾಬ್ ರಿಪೋರ್ಟ್ ಹೇಳಿದೆ.
ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ವೈಎಸ್ಆರ್ಸಿಪಿ ವಿರುದ್ಧ ಹರಿದುಬಿದ್ದಿದ್ದಾರೆ, ಜಗನ್ ಮೋಹನ್ ರೆಡ್ಡಿ ಅವರು ದೇವಸ್ಥಾನ ಮತ್ತು ಸನಾತನ ಧರ್ಮವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.